Chitradurga : ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ(Sexually) ಬಳಸಿಕೊಂಡಿರುವ ಆರೋಪ ಎದುರಿಸುತ್ತಿರುವ ಲಿಂಗಾಯತ ಸಮುದಾಯದ ಧಾರ್ಮಿಕ ಮುಖಂಡ ಚಿತ್ರದುರ್ಗದ(Chitradurga) ಮುರುಘಾ ಮಠದ ಢಾ. ಶಿವಮೂರ್ತಿ ಶರಣರನ್ನು ರಾತ್ರಿ ಬಂಧಿಸಲಾಗಿದೆ. 6 ದಿನಗಳ ಹಿಂದೆ ಅವರ ಮೇಲೆ ಫೋಕ್ಸೋ ಕಾಯ್ದೆಯಡಿ(Poxo Act) ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪ್ರಮುಖ ಅಂಶಗಳು :
- 64 ವರ್ಷದ ಡಾ . ಶಿವಮೂರ್ತಿ ಮುರುಘಾ ಶರಣರು ಪ್ರಮುಖ ಲಿಂಗಾಯತ ಮಠ, ಮುರುಘಾ ಮಠದ ಪೀಠಾಧಿಪತಿಯಾಗಿದ್ದಾರೆ.
- ಆರೋಪ ಮಾಡಿರುವ ಬಾಲಕಿ ಪೈಕಿ ಓರ್ವ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವಳಾಗಿದ್ದು, ಹೀಗಾಗಿ ಪೋಕ್ಸೊ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ರಕ್ಷಿಸುವ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- ಕರ್ನಾಟಕದ ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಾದ್ಯಂತ ನಾಗರಿಕ ಸಮಾಜ ಮತ್ತು ವಿವಿಧ ಸಂಘಟನೆಗಳ ಅಹೋರಾತ್ರಿ ಪ್ರತಿಭಟನೆಯ ನಂತರ ರಾತ್ರಿ 10.15 ರ ಸುಮಾರಿಗೆ ಬಂಧಿಸಿ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 6 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
- ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
- ಶ್ರೀಗಳನ್ನು ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಪೊಲೀಸ್ಉಪ ಅಧೀಕ್ಷಕರ ಕಚೇರಿಗೆ ಸ್ಥಳಾಂತರಿಸಲಾಗಿದೆ. ಇಂದು ರಾತ್ರಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆಯೇ ಎಂಬುದು ಇನ್ನೂ ತಿಳಿದಿಲ್ಲ.
- ಆಗಸ್ಟ್ 26 ರಂದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
- ಜುಲೈನಲ್ಲಿ ಶ್ರೀಗಳ ವಿರುದ್ದ ದೂರು ಸಲ್ಲಿಸಲು ಬಾಲಕಿಯರು ನಡೆಸಿದ ಪ್ರಯತ್ನ ವಿಫಲವಾಗಿತ್ತು.
- ಈ ತಿಂಗಳ ಆರಂಭದಲ್ಲಿ ಶಿವಮೂರ್ತಿ ಶರಣರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗ ದೀಕ್ಷೆ ನೀಡಲಾಗಿತ್ತು.
- ಶ್ರೀಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಾರ್ವಜನಿಕವಾಗಿ ಬೆಂಬಲಿಸಿದ್ದರು.