• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪುನೀತ್ ಸ್ಮರಣಾರ್ಥ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ – ಮುರುಗೇಶ್ ನಿರಾಣಿ

Preetham Kumar P by Preetham Kumar P
in ರಾಜ್ಯ
ಪುನೀತ್ ಸ್ಮರಣಾರ್ಥ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ – ಮುರುಗೇಶ್ ನಿರಾಣಿ
0
SHARES
0
VIEWS
Share on FacebookShare on Twitter

ಬೆಂಗಳೂರು ನ 10 : ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಕಲಬುರಗಿಯಲ್ಲಿ ಇದೇ 11 ರಂದು ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಿಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ತೀರ್ಮಾನಿಸಿದ್ದಾರೆ.

ಇದೇ ತಿಂಗಳ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ‘ಉದ್ಯಮಿಯಾಗು ಉದ್ಯೋಗ ನೀಡು’ ಮತ್ತು ಕೈಗಾರಿಕೆ ಅದಾಲತ್ ಕಾರ್ಯಾಗಾರವನ್ನು ಆಯೋಜಿಸಿದೆ. ಕಾರ್ಯಾಗಾರ ನಡೆಯುವ ವೇದಿಕೆಗೆ ಪುನೀತ್ ರಾಜ್ ಕುಮಾರ್ ಎಂದು ಹೆಸರಿಟ್ಟು ಆಗಲಿದ ಮೇರು ನಟನೆಗೆ ಗೌರವ ಸಮರ್ಪಣೆ ಸಲ್ಲಿಸಲು ಸಚಿವ ನಿರಾಣಿ ಅವರು ಮುಂದಾಗಿದ್ದಾರೆ.

ಕಲಬುರಗಿ ಮಾತ್ರವಲ್ಲದೆ, ಮುಂದೆ ನಡೆಯಲಿರುವ ಮೈಸೂರು, ಬೆಳಗಾವಿ, ಕರಾವಳಿಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ವಸಮ್ಮತದ ತೀರ್ಮಾನವನ್ನು ಸಚಿವರು ತೆಗೆದುಕೊಂಡಿದ್ದಾರೆ.

ಯುವಜನತೆಯು ಯಾರೊಬ್ಬರ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ಬದುಕಬೇಕು ಎಂಬುದು ಅಪ್ಪು ಅವರ ಕನಸಾಗಿತ್ತು. ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ಪುನೀತ್ ರಾಜ್‍ಕುಮಾರ್ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಉದ್ಯಮಶೀಲತೆ ತೋರಿದರು. ಅವರು ಪಿಆರ್‍ಕೆ ಪ್ರೊಡಕ್ಷನ್ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು ಎಂದು ನಿರಾಣಿ ಕೊಂಡಾಡಿದರು.

ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿದ್ದ ನಿರಾಣಿ ಅವರು, ಅಪ್ಪುವಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ನಂತರ ಪುನೀತ್ ರಾಜ್‍ಕುಮಾರ್ ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಸಂಬಂಕರಾದ ಮಧು ಬಂಗಾರಪ್ಪ, ಸೇರಿದಂತೆ ಮತ್ತಿತರರ ಜೊತೆ ಪ್ರಸಾದ ಸೇವಿಸಿದರು.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.