Mysuru : ಮುರುಘಾ ಮಠದ(Muruga Mutt) ವಿದ್ಯಾರ್ಥಿನಿಲಯದಲ್ಲಿದ್ದ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ,
ಅವರನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ(Chitradurga) ಮುರುಘಾ ಮಠದ ಶ್ರೀಗಳ ವಿರುದ್ದ ಇದೀಗ ಮೈಸೂರಿನಲ್ಲಿ(Mysuru) ಮತ್ತೊಂದು ಪ್ರಕರಣ ದಾಖಲಾಗಿದೆ.
ಈಗಾಗಲೇ ಪೋಕ್ಸೋ ಕಾಯ್ದೆಯಡಿ (Poxo Act) ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ದ ಮೈಸೂರಿನ ಒಡನಾಡಿ ಸಂಸ್ಥೆಯ ನೆರವಿನೊಂದಿಗೆ ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಕೆಲಸದವಳು,
ತಮ್ಮ ಮಕ್ಕಳಿಗೆ ಮುರುಘಾ ಶ್ರೀಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಗರದ ನಜರಾಬಾದ್ ಪೊಲೀಸ್ ಠಾಣೆಯಲ್ಲಿ (Murugha Shree Case Continues) ಎಫ್‌ಐಆರ್ (FIR) ದಾಖಲಿಸಿದ್ದಾರೆ. https://youtu.be/ePaKoWNb8HA
ಈ ಎಫ್‌ಐಆರ್‌ನಲ್ಲಿ ಏಳು ಜನರ ಹೆಸರನ್ನು ಪ್ರಸ್ತಾಪ ಮಾಡಲಾಗಿದೆ. ಇವರೆಲ್ಲರ ಸಹಾಯದಿಂದ ಮುರುಘಾ ಶ್ರೀಗಳು ನಮ್ಮ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ, ಮಕ್ಕಳ ಬೆತ್ತಲೆ ವಿಡಿಯೋಗಳನ್ನು ಚಿತ್ರೀಕರಣ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಇದನ್ನೂ ಓದಿ : https://vijayatimes.com/kejrival-slams-gst-hike/
ಕರಣ ದಾಖಲಿಸಿಕೊಂಡಿರುವ ನಜರಾಬಾದ್ (Murugha Shree Case Continues) ಠಾಣೆಯ ಪೊಲೀಸರು, ಈ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.
ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೂ ದೂರುದಾರರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಈಗಾಗಲೇ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಚಿತ್ರದುರ್ಗ ನ್ಯಾಯಾಲಯ ವಜಾಗೊಳಿಸಿತ್ತು. ಈ ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು,
ಈ ಕುರಿತು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ಸದ್ಯಕ್ಕೆ ಜಾಮೀನು(Bail) ನೀಡಲು ಸಾಧ್ಯವಿಲ್ಲ.
ಅದೇ ರೀತಿ ಜೈಲಿನಿಂದಲೇ ಮುರುಘಾ ಮಠದ ಹಣಕಾಸು ವ್ಯವಹಾರಗಳನ್ನು ನಡೆಸಲು ಮತ್ತು ಮಠದ ಉದ್ಯೋಗಿಗಳಿಗೆ ಸಂಬಳ ನೀಡಲು ಶ್ರೀಗಳಿಗೆ ಅವಕಾಶ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಅರ್ಜಿಯನ್ನು ಕೂಡಾ ನ್ಯಾಯಾಲಯ ತಿರಸ್ಕರಿಸಿದೆ.
ಇದನ್ನೂ ಓದಿ : https://vijayatimes.com/bsy-slams-siddaramaiah/
ಬಂಧನದಲ್ಲಿರುವ ವ್ಯಕ್ತಿಗೆ ಆರ್ಥಿಕ ವ್ಯವಹಾರಗಳನ್ನು ನಡೆಸಲು ಅನುವು ಮಾಡಿಕೊಡುವುದಕ್ಕೆ ಸಾಧ್ಯವಿಲ್ಲ. ಅವರು ತನಿಖೆಯನ್ನು ಎದುರಿಸಬೇಕಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
–ಮಹೇಶ್.ಪಿ.ಎಚ್