ಬೆಂಗಳೂರು, ಡಿ. 16: ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರ ದಾಳಿ ಮುಂದುವರಿದಿದ್ದು, ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ತಿರುಪಾಲ್, ಕಮಲೇಶನ್ ಹಾಗೂ ಎಜಾಜ್ ಪಾಷ ಬಂಧಿತ ಆರೋಪಿಗಳಾಗಿದ್ದು, ಇವರಿಂದ 1.15 ಕೋಟಿ ಮೌಲ್ಯದ ಡ್ರಗ್ಸ್ ಅನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಅಮೃತಹಳ್ಳಿಯಲ್ಲಿ ಮೂವರನ್ನ ಬಂಧಿಸಲಾಗಿದೆ. ನ್ಯೂ ಇಯರ್ ಗುರಿಯಾಗಿಸಿಕೊಂಡು ಬಂಧಿತ ಆರೋಪಿಗಳು ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ಕಾರು ಬೈಕ್ ವಶಕ್ಕೆ ಪಡೆಯಲಾಗಿದೆ.