‘ನನ್ನ ತಂದೆಗೆ ಮತ್ತೊಮ್ಮೆ ಸಿಎಂ ಆಗುವ ಅವಕಾಶವಿದೆ’ : ಯತೀಂದ್ರ ಸಿದ್ದರಾಮಯ್ಯ

Bengaluru : 2023ರ ವಿಧಾನಸಭಾ ಚುನಾವಣೆಗೆ(My Father Will Become CM) ಕ್ಷಣಗಣನೆ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಪಾಳ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ರಾಜ್ಯ ಕಾಂಗ್ರೆಸ್‌ ಮಾತನಾಡಿಕೊಳ್ಳುತ್ತಿದೆ.

ಈ ಮಧ್ಯೆ ಸಿದ್ದರಾಮಯ್ಯ ಅವರ ಪುತ್ರ ಮತ್ತು ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆ ಮತ್ತೊಮ್ಮೆ ಸಿಎಂ ಆಗುವ ಅವಕಾಶವಿದೆ ಎಂದು ಪ್ರತಿಪಾದಿಸಿದರು.

ಯತೀಂದ್ರ ಸಿದ್ದರಾಮಯ್ಯ(Yatindra Siddaramaiah) ಅವರು ತಮ್ಮ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ತಂದೆಯನ್ನು ಒತ್ತಾಯಿಸಿದ್ದಾರೆ.

‘ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಈ ಹಿಂದೆ ವರುಣಾದಿಂದ ಸ್ಪರ್ಧಿಸಿದಾಗಲೆಲ್ಲಾ ಅಧಿಕಾರ ಸಿಕ್ಕಿದೆ, ಈ ಬಾರಿಯೂ ಸಿಗಬಹುದು,

ಹೀಗಾಗಿ ತಂದೆಯವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ನಮ್ಮ ಆಸೆ ಎಂದು ಯತೀಂದ್ರ ಹೇಳಿದ್ದಾರೆ.

https://youtu.be/LNyZGCf7aoc ಮಣ್ಣಿಲ್ಲದೆಯೇ ಕೃಷಿ!

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ವರುಣಾ ಕ್ಷೇತ್ರದಿಂದ(Varuna Constituency) ಸ್ಪರ್ಧಿಸುವಂತೆ ತಂದೆಗೆ ವೈಯಕ್ತಿಕವಾಗಿ ಮನವಿ ಮಾಡಿದ್ದು ಇದೆ, ಅದು ನನ್ನ ಬೇಡಿಕೆಯೂ ಹೌದು ಎಂದರು.

“ನನ್ನ ತಂದೆ ಎಲ್ಲಿಂದ ಸ್ಪರ್ಧಿಸಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ವಿವಿಧ ಕ್ಷೇತ್ರಗಳ ರಾಜಕೀಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ತಮ್ಮ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ನಮ್ಮ ತಂದೆಯನ್ನು ಮುಖ್ಯಮಂತ್ರಿ ಹುದ್ದೆಯ ಮಹತ್ವಾಕಾಂಕ್ಷಿಯಾಗಿ ಅವರ ಬೆಂಬಲಿಗರು ಮತ್ತು ಹಿತೈಷಿಗಳು ನೋಡಲು ಬಯಸುತ್ತಿದ್ದಾರೆ.

ಈ ವರ್ಷದ ಆರಂಭದಲ್ಲಿ ಅವರ 75ನೇ ಹುಟ್ಟುಹಬ್ಬದ ಸಂಭ್ರಮವನ್ನು ಕಾಂಗ್ರೆಸ್ ಪಕ್ಷ ಒಳಗೊಂಡಿತ್ತು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್(DK Shivkumar) ಕೂಡ ಇದೇ ರೀತಿಯ ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದು,

ಅವರ ಬೆಂಬಲಿಗರು ಸಹ ಅವರನ್ನು ಮುಂದಿನ ಸಿಎಂ ಎಂದೇ ನೋಡುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/state-congress-tweet-fires/

2023ರ ಚುನಾವಣೆ ತಂದೆಯ ಕೊನೆಯ ಚುನಾವಣೆಯಾಗಿರುವುದರಿಂದ ಅವರು ವರುಣಾದಿಂದ ಸ್ಪರ್ಧಿಸಬೇಕು ಎಂದು ಪ್ರತಿಪಾದಿಸಿದ ಯತೀಂದ್ರ,

ತಾವು ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದಾಗ ಪ್ರತಿಪಕ್ಷದ ನಾಯಕರಾಗಿ ನಂತರ ಮುಖ್ಯಮಂತ್ರಿಯಾದ ಕಾರಣ ವರುಣ ಅವರಿಗೆ ಅದೃಷ್ಟವಾಗಿ ಒಲಿದು ಬಂದಿದೆ ಎಂದು ಹೇಳಿದರು.

ತಂದೆ ಅವರು ವರುಣಾದಿಂದ ಸ್ಪರ್ಧಿಸಲು ನಿರ್ಧರಿಸಿದರೆ ಬೇರೆಡೆ ಸ್ಪರ್ಧಿಸುವುದಿಲ್ಲ, ತಂದೆಯ ಪರವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇನ್ನೂ ಕ್ಷೇತ್ರವನ್ನು ನಿರ್ಧರಿಸಲು ಮಾಜಿ ಸಿಎಂ ಸಿದ್ದರಾಮಯ್ಯನವರು ಬಾದಾಮಿ, ವರುಣಾ, ಹೆಬ್ಬಾಳ, ಕೋಲಾರ, ಕೊಪ್ಪಳ ಮತ್ತು ಚಾಮರಾಜಪೇಟೆಯಿಂದ ಸ್ಪರ್ಧಿಸುವಂತೆ ಒತ್ತಡವಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/assam-cm-gifts-e-bike/

2013-18ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 2018 ರಲ್ಲಿ ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ನ ಜಿಟಿ ದೇವೇಗೌಡರ ಎದುರು ಸೋತಿದ್ದರು.

ಆದರೆ, ಅವರು ಸ್ಪರ್ಧಿಸಿದ್ದ ಇನ್ನೊಂದು ಕ್ಷೇತ್ರವಾದ ಬಾದಾಮಿಯಲ್ಲಿ ಬಿಜೆಪಿಯ ಬಿ. ಶ್ರೀರಾಮುಲು ಅವರನ್ನು ಸೋಲಿಸಿದ್ದರು ಎಂಬುದು ಸದ್ಯದ ಲೆಕ್ಕಾಚಾರ.

Exit mobile version