ಆಸ್ತಿಗಳ ನೋಂದಣಿ ಅಕ್ರಮ ತಡೆಗಟ್ಟಲು ನನ್ನ ಆಸ್ತಿ ನನ್ನ ಗುರುತು ಯೋಜನೆ; ಸಚಿವ ಕೃಷ್ಣ ಬೈರೇಗೌಡ

Bengaluru: ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ (My Property is My Identity Scheme) ಆಸ್ತಿಗಳ ನೋಂದಣಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಸಾಕಷ್ಟು ಸುಧಾರಣೆಗಳನ್ನು

ಮಾಡಿದೆ. ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್

(Aadhar) ಜೋಡಣೆ ಕಾರ್ಯವನ್ನು ಇತ್ತೀಚಿಗೆ ಆರಂಭಿಸಲಾಗಿದೆ.’ನನ್ನ ಆಸ್ತಿ’ ಯೋಜನೆಯಡಿ ‘ನನ್ನ ಆಸ್ತಿ ನನ್ನ ಗುರುತು’ ಎಂಬ ಉದ್ದೇಶದಿಂದ ಈ ಕಾರ್ಯವನ್ನು ಮಾಡಲು ಆರಂಭಿಸಿದ್ದೇವೆ.

My Property is My Identity Scheme

ಈಗಾಗಲೇ ಕೆಲವೆಡೆ ಪೈಲಟ್ (Pilot) ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ (Krishna Byregowda) ಹೇಳಿದ್ದಾರೆ. ಕಂದಾಯ

ಇಲಾಖೆ ಇನ್ನು ಹಳೆಯ ನೀತಿಗಳನ್ನೆ ಪಾಲಿಸುತ್ತಿದೆ ಬದಲಾದ ದಿನಮಾನದಲ್ಲಿ ಆಧುನೀಕರಣ ಮಾಡಬೇಕಿದೆ .ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ

ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ (My Property is My Identity Scheme) ಜೋಡಣೆ ಕಾರ್ಯವನ್ನು ಸಹ ಕೈಗೊಳ್ಳಲಾಗಿದೆ.

ಹಾಗಾಗಿ ಈಗಾಗಲೇ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ

ಪಹಣಿಗಳು ಇದ್ದರೆ ದುರುಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ

ಕಡಿವಾಣ ಹಾಕಬಹುದಾಗಿದೆ ಎಂದು ಹೇಳಿದ್ದಾರೆ.

ಇನ್ನು ಮುಂದೆ ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅವರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ, ತದನಂತರ ನೋಂದಣಿ

ಮಾಡಲಾಗುತ್ತಿದೆ. ಇದರಿಂದಾಗಿ ಒಂದಷ್ಟು ಅಕ್ರಮಗಳನ್ನು ತಡೆಯಬಹುದು. ಒಂದಿಷ್ಟು ಅಕ್ರಮಗಳ ನಿಲ್ಲಿಸಬಹುದು ಎಂದಿದ್ದಾರೆ.ಲೋಕಸಭೆ ಚುನಾವಣೆ ಘೋಷಣೆಯಾದ ನಂತರವೂ ಆರ್‌ಟಿಸಿ (RTC)

ದಾಖಲೆಗಳೊಂದಿಗೆ ಆಧಾರ್ ಲಿಂಕ್ ಮಾಡುವುದನ್ನು ಮುಂದುವರಿಸುವಂತೆ ಗ್ರಾಮ ಲೆಕ್ಕಿಗರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು (Bengaluru) ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ

ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

Exit mobile version