ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಪ್ರತಿಯಾಗಿ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ!

Bengaluru: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ (taxes to the state) ವಿಚಾರದಲ್ಲಿ (My tax is my right) ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದವರು

‘ನನ್ನ ತೆರಿಗೆ ನನ್ನ ಹಕ್ಕು (‘My tax is my right’) ಘೋಷವಾಕ್ಯದಡಿ ದೆಹಲಿ (Delhi) ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ

ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ (My tax is my right) ಪ್ರತಿಭಟನೆ ಮಾಡಲಿದ್ದಾರೆ.

ವಿಧಾನಸೌಧದ (Vidana Sowda) ಎದುರು ರಾಜ್ಯದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ (BJP) ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ರಾಜ್ಯದ 223

ತಾಲ್ಲೂಕುಗಳು (Taluks) ಬರ ಪೀಡಿತ (Drought prone) ಎಂದು ಘೋಷಣೆ ಮಾಡಲಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿಲ್ಲ. 2000 ರೂಪಾಯಿ ರೈತರಿಗೆ

ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈ ಹಣ ಇನ್ನೂ ತಲುಪಿಲ್ಲ. ಸರ್ಕಾರ ಪರಿಹಾರವನ್ನು ನೀಡುವ ಬದಲಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಬಿಜೆಪಿ (BJP)

ಆರೋಪಿಸಿದೆ.

ಸರ್ಕಾರದ (Government) ಈ ಧೋರಣೆಯನ್ನು ಖಂಡಿಸಿ ಬಿಜೆಪಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಮೂಲಕ ಒಂದೇ

ದಿನ ಎರಡು ಪಕ್ಷಗಳು ದೆಹಲಿ (Delhi) ಹಾಗೂ ರಾಜ್ಯದಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಏಟಿಗೆ ಎದಿರೇಟು ನೀಡಲು ಸಜ್ಜಾಗಿವೆ.ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ

ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಪ್ರತಿಭಟನೆ

ನಡೆಸುತ್ತಿದ್ದೇವೆ ಎಂದು ಬಿಜೆಪಿ (BJP) ನಾಯಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿದೆ (Situation is very bad). ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಭರಾಟೆಯಲ್ಲಿ ಸರ್ಕಾರ ಬೊಕ್ಕಸವನ್ನು ಬರಿದು ಮಾಡಿದೆ.

ಹೀಗಾಗಿ ಬರ ನಿರ್ವಹಣೆ ಮಾಡಲು ಸರ್ಕಾರದ ಬಳಿ ಹಣವಿಲ್ಲದೇ ರೈತರನ್ನು ನಡುನೀರಿನಲ್ಲಿ ಕೈಬಿಟ್ಟಿದೆ ಎಂದು ಬಿಜೆಪಿ ದೂರಿದೆ. ಇನ್ನು ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ

ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R. Ashok), ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ

ನಡೆದಿದ್ದು, ಈ ಹೋರಾಟದಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.

Exit mobile version