ಮೈಸೂರು, ಫೆ. 26: ತಮ್ಮ ಆಡಳಿತ ವೈಖರಿ, ಸರಳ ವ್ಯಕ್ತಿತ್ವದ ಮೂಲಕ ಹಲವರ ಮೆಚ್ಚುಗೆ ಪಡೆದಿರುವ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಇದೀಗ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಈ ಹಿಂದಿನ ಹಲವು ಸಂದರ್ಭಗಳಲ್ಲಿ ತಾವೊಬ್ಬ ಜಿಲ್ಲಾಧಿಕಾರಿ ಎಂಬ ಮನಸ್ಥಿತಿ ಇಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾನ್ಯ ಜನರ ನಡುವೆ ಕಾಣಿಸಿಕೊಂಡಿದ್ದ ರೋಹಿಣಿ ಸಿಂಧೂರಿ, ಇದೀಗ ತಮ್ಮ ಕಾರಿನ ಟೈರ್ ಬದಲಾಯಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದ್ದಾರೆ.
ಹೌದು, ಕುಟುಂಬದ ಜೊತೆ ಹೊರ ಹೋಗಿದ್ದ ಸಂಧರ್ಭದಲ್ಲಿ ತಾವೇ ಕಾರಿನ ಟೈರ್ ಬದಲಿಸುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕಾರಿನ ಟೈರ್ ಕಳಚುವ ವೇಳೆ ವೀಡಿಯೋ ಮಾಡಿರುವ ಸಾರ್ವಜನಿಕರು, ತಾವು ರೋಹಿಣಿ ಸಿಂಧೂರಿ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, ನಕ್ಕು ಸುಮ್ಮನಾಗಿದ್ದಾರೆ. ಆದರೆ ಡಿಸಿ ರೋಹಿಣಿ ಸಿಂಧೂರಿ, ಅವರು ಕಾರಿನ ಟೈಯರ್ ಬದಲಿಸುತ್ತಿರುವ ವಿಡಿಯೋ ಮಾತ್ರ ಎಲ್ಲೆಡೆ ವೈರಲ್ ಆಗಿದೆ.