ಇಮೇಲ್ ಹ್ಯಾಕ್ ಮಾಡುತ್ತಿದ್ದ ನಾಗಾಲ್ಯಾಂಡ್ ಮೂಲದ ಮೂವರ ಬಂಧನ

ಬೆಂಗಳೂರು, ಮಾ. 10: ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಇ ಮೇಲ್ ಹ್ಯಾಕ್ ಮಾಡಿ ಸ್ನೇಹಿತರಿಂದ ಹಣ ವರ್ಗಾವಣೆ ಮಾಡಿಸಿಕೊಂಡಿದ್ದ ನಾಗಾಲ್ಯಾಂಡ್‌ ಮೂಲದ ಮೂವರು ಆನ್‌ಲೈನ್ ವಂಚಕರನ್ನು ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

ನ್ಯಾಗಾಲ್ಯಾಂಡ್ ಮೂಲದ ಥಿಯಾ(31), ಸೆರೋಪಾ(27) ಹಾಗೂ ಇಸ್ಟರ್ ಕೊನ್ಯಾಕ್ ಬಂಧಿತರು. ಈ ಆರೋಪಿಗಳು ಇತ್ತೀಚೆಗೆ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಇ-ಮೇಲ್ ಹ್ಯಾಕ್ ಮಾಡಿ, ಹಣ ಕಳುಹಿಸುವಂತೆ ಬಿದರಿ ಅವರ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದಲ್ಲದೇ ಬಿದರಿ ಅವರ ಸ್ನೇಹಿತರ ಕಡೆಯಿಂದ ₹25,000 ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶಂಕರ್ ಬಿದರಿ ಅವರು ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆ ನಡೆಸಿದ ಸೈಬರ್ ಕ್ರೈಮ್ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಲಕ್ಷ ನಗದು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Exit mobile version