ಬೆಂಗಳೂರು ಡಿ. 07: ಕೇಂದ್ರ ಸರ್ಕಾರದ ಜನ ವಿರೋಧಿ ಕಾನೂನು ವಿರುದ್ಧ ರೈತರು ನೀಡಿರುವ ಭಾರತ್ ಬಂದ್ಗೆ ನಮ್ಮ ಬೆಂಬಲವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಭಾರತ್ ಬಂದ್ಗೆ ನಮ್ಮ ಬೆಂಬಲವಿದೆ. ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ತಂದಿರುವುದು ಸರಿಯಲ್ಲ ಎಂದು ಹೇಳಿದರು.
ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇ ಗೌಡ ಮಾತನಾಡಿ, ಕೇಂದ್ರದ ರೈತ ವಿರೋಧಿ ನೀತಿ ವಿರುದ್ಧ ಬಂದ್ ಕರೆಯಲಾಗಿದ್ದು, ಅದಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ. ರೈತರನ್ನು ವಿರೋಧ ಮಾಡಿದ ಯಾವ ರಾಜಕಾರಣಿಗಳು ಉಳಿದಿಲ್ಲ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ರೈತರ ಪರವಾಗಿ ನಾವಿರುವುದಾದರೆ ಸದನವನ್ನು ಬಂದ್ ಮಾಡಬೇಕು. ಆಡಳಿತ ಪಕ್ಷದವರು ಏನು ಬೇಕಾದರೂ ಮಾಡಲಿ. ಆದರೆ, ಪ್ರತಿಪಕ್ಷದವರು ನಾಳೆ ಕಲಾಪ ಬಹಿಷ್ಕರಿಸಬೇಕೆಂದು ಸಲಹೆ ಮಾಡಿದರು.
ವಿಧಾನಪರಿಷತ್ನ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ನಮ್ಮ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದರು.