ಸೈಲೆಂಟ್ ಸುನಿಲ್‌ನನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸುವುದಿಲ್ಲ : ನಳಿನ್‌ ಕುಮಾರ್ ಕಟೀಲ್

Bengaluru : ಸೈಲೆಂಟ್ ಸುನಿಲ್‌ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಬಿಜೆಪಿ (Nalin About Silent Sunil), ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. 

ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನಲೆ ಉಳ್ಳವರನ್ನೂ ಬಿಜೆಪಿ ಪಕ್ಷ ಎಂದಿಗೂ ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ ಕಟೀಲ್‌(Nalin About Silent Sunil) ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಅಪರಾಧ ಹಿನ್ನಲೆಯುಳ್ಳ ಸೈಲೆಂಟ್‌ ಸುನೀಲ್‌ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತೀವ್ರ ಟೀಕೆಗೆ ಗುರಿಯಾಗಿತ್ತು. 40% ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ ಬಿಜೆಪಿ ತಯಾರಿ ನಡೆಸಿರುವಂತಿದೆ.

ಇದನ್ನೂ ಓದಿ : https://vijayatimes.com/inspiring-transgender-dr-nakshatra/

ಬಿಜೆಪಿಯಲ್ಲಿ “ರೌಡಿ ಮೋರ್ಚಾ” ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ. ಸೋಲುವ ಭಯದಲ್ಲಿರುವ ಬಿಜೆಪಿ ರೌಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ ಬೊಮ್ಮಾಯಿ ಅವರೇ? ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ? ಎಂದು ರಾಜ್ಯ ಕಾಂಗ್ರೆಸ್‌(Congress) ಸರಣಿ ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿದೆ.

ಗಡಿಪಾರಾಗಿದ್ದ ಕ್ರಿಮಿನಲ್‌ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿದ್ದ ಬಿಜೆಪಿಗೆ ರೌಡಿಗಳು, ಕ್ರಿಮಿನಲ್‌ಗಳೇ ಆದರ್ಶ ವ್ಯಕ್ತಿಗಳು ಪೊಲೀಸರಿಂದ ಇಂತಹ ಆತಿಥ್ಯ ಪಡೆದ ಈ ವ್ಯಕ್ತಿಗೆ ರಾಜಾತಿಥ್ಯ ನೀಡುತ್ತಿದೆ ಬಿಜೆಪಿ.

ಪೊಲೀಸರೆದುರು ತಲೆ ತಗ್ಗಿಸಿ ನಿಲ್ಲುವವನಿಗೆ ಅದೇ ಪೊಲೀಸರಿಂದ ಸೆಲ್ಯೂಟ್ ಹೊಡೆಸಲು ಹವಣಿಸುತ್ತಿದೆ ಬಿಜೆಪಿ.

https://fb.watch/h5mrL38_Hf/ ಬೆಂಗಳೂರು : ಕೋಣನಕುಂಟೆ ಕ್ರಾಸ್ ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಮನಬಂದಂತೆ ಅವಮಾನಿಸಿದ ವ್ಯಕ್ತಿ!

ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು.

ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ  ಬಿಜೆಪಿ ಪಕ್ಷ ತವರು ಮನೆ ಇದ್ದಂತೆ.

ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್. ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ ಎಂದು ಟೀಕಿಸಿದೆ.

ಇದನ್ನೂ ಓದಿ : https://vijayatimes.com/masala-powder-bath/

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್. ಆರಗ ಜ್ಞಾನೇಂದ್ರ(Araga Jnanendra) ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ?

ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.
Exit mobile version