ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಜವಾಬ್ದಾರಿ ಹೊತ್ತ ನಳೀನ್ ಕುಮಾರ್ ಕಟೀಲ್

Praveen Nettar

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುಳ್ಯ(Sulya) ತಾಲ್ಲೂಕಿನ ನೆಟ್ಟೂರು ಗ್ರಾಮದ ಬಿಜೆಪಿ ಮುಖಂಡ(BJP Leader) ಪ್ರವೀಣ್ ನೆಟ್ಟಾರು(Praveen Nettaru) ಹತ್ಯೆಯಾಗಿದ್ದು, ರಾಜ್ಯಾದ್ಯಂತ ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರವೀಣ್ ನೆಟ್ಟಾರು ಅವರನ್ನು ಅಪರಿಚಿತರ ತಂಡ ಮಾರಕಾಸ್ತ್ರಗಳಿಂದ ಹತ್ಯೆಗೈದಿದ್ದಾರೆ(Murdered). ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಮಂಗಳೂರು ಭಾಗಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ಇದರೊಟ್ಟಿಗೆ 144 ಸೆಕ್ಷನ್(Section 144) ಕೂಡ ಜಾರಿಯಾಗಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ(BJP StatePresident) ನಳೀನ್ ಕುಮಾರ್ ಕಟೀಲ್(Nalin Kumar Kateel) ವಾಹನವನ್ನು ಅಡ್ಡಗಟ್ಟಿದ ಜನರು, ಪ್ರವೀಣ್ ಸಾವಿಗೆ ನೀವೇ ಕಾರಣ ಎಂದು ಆರೋಪಿಸಿ, ಪ್ರತಿಭಟಿಸಿದ್ದಾರೆ. ಸದ್ಯ ಈ ಕುರಿತು ಧಿಡೀರ್ ತುರ್ತು ಸುದ್ದಿಗೋಷ್ಠಿ ಕರೆದ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai), ಬಿಜೆಪಿ ಸರ್ಕಾರ ಹಮ್ಮಿಕೊಂಡಿದ್ದ ಒಂದು ವರ್ಷದ `ಜನೋತ್ಸವ’ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ಪ್ರವೀಣ್ ನೆಟ್ಟಾರು ಅವರ ಸಾವು ತೀವ್ರ ನೋವನ್ನು ತಂದಿದೆ.

ಆರೋಪಿಗಳಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಮಾಡಲಿದ್ದೇವೆ ಎಂದು ಹೇಳಿದರು. ಸದ್ಯ ಸಿಎಂ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ಮಧಾಹ್ನ 3:15ಕ್ಕೆ ವಿಮಾನದ ಮುಖೇನ ನೆಟ್ಟಾರು ಗ್ರಾಮಕ್ಕೆ ತೆರಳಿ ಪ್ರವೀಣ್ ಕುಟುಂಬವನ್ನು ಭೇಟಿ ಮಾಡಲಿದ್ದಾರೆ. ಈ ಮುನ್ನ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಪ್ರವೀಣ್ ಕುಟುಂಬಕ್ಕೆ ಸಾಂತ್ವಾನ ತಿಳಿಸಿ ಬರುತ್ತೇವೆ ಜೊತೆಗೆ ಕುಟುಂಬಕ್ಕೆ ಮನೆಯೊಂದನ್ನು ನಿರ್ಮಿಸಿಕೊಡುವ ಜವಾಬ್ದಾರಿ ನಮ್ಮದು. ಪಿಎಫ್‍ಐ ಸಂಘಟನೆಯನ್ನು ನಿಷೇಧಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯ ಸರ್ಕಾರ(State Government) ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಣವಾಗಿ ಕೊಡಲಿದೆ ಎಂಬುದು ವರದಿಯಲ್ಲಿ ತಿಳಿದುಬಂದಿದೆ. ಈಗಾಗಲೇ ಹಲವು ರಾಜಕಾರಣಿಗಳು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವಾನ ತಿಳಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಬಿ.ವೈ ವಿಜಯೇಂದ್ರ(BY Vijayendra) ಕೂಡ ಭೇಟಿ ನೀಡಿ ಸಾಂತ್ವಾನ ತಿಳಿಸಿ ಬಂದಿದ್ದಾರೆ.

Exit mobile version