Karnataka: ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ “ವಿತ್ತನೀತಿ”ಯನ್ನು ಸಿದ್ದರಾಮಯ್ಯನವರು (Nalinkumar mocked Siddaramaiah) ರಾಜ್ಯದ ಮೇಲೆ ಹೇರಿ ಹೋಗಿದ್ದಾರೆ.
ಸಾಲ ಎತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥವ್ಯವಸ್ಥೆಗೆ ನಿಮ್ಮ
ನೀತಿ ಆದರ್ಶ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ ಕಟೀಲ್ (Nalin kumar kateel) ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದ್ದಾರೆ.
ಅರ್ಥಶಾಸ್ತ್ರದ ಸರಳ ತತ್ವದ ಅರಿವಿಲ್ಲದ ಸುನಿಲ್ ಕುಮಾರ್ (Sunil kumar) ಅವರ ಜ್ಞಾನಭಂಡಾರದ ಬಗ್ಗೆ ಅನುಕಂಪವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂಧನ ಸಚಿವ ಸುನಿಲ್ ಕುಮಾರ್ ಅವರನ್ನು ಲೇವಡಿ ಮಾಡಿದ್ದರು.
ಅದಕ್ಕೆ ಪ್ರತಿಕ್ರಿಯೆ ನೀಡಿ ಸರಣಿ ಟ್ವೀಟ್(Tweet) ಮಾಡಿರುವ ಕಟೀಲ್ ಅವರು, ನೀವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಸಿಎಲ್ (KPCL) ಮೇಲಿನ ೧೦,೨೦೩ ಕೋಟಿ ರೂ. ಸಾಲವೂ ಸೇರಿದಂತೆ ೨೦೧೩ರಿಂದ ೨೦೧೮ರ ಅವಧಿಯಲ್ಲಿ ೩೩,೪೧೪.೨೦ ಕೋಟಿ ಸಾಲದ ಗಂಟನ್ನು ಎಸ್ಕಾಂಗಳ ಮೇಲೆ ಹೊರಿಸಿದ್ದಿರಿ.
ಇದನ್ನೂ ಓದಿ: https://vijayatimes.com/siddaramaiah-ironic-to-sunil-kumar/
ನೀವೇ ಸ್ಟೇರಿಂಗ್ ಹಿಡಿದು “ಸಮನ್ವಯ” ಸಾಧಿಸಿದ ಮೈತ್ರಿ ಸರ್ಕಾರದ ಕಾಲದಲ್ಲಿ ೨೭,೧೭೮ ಕೋಟಿ ರೂ. ಸಾಲದ ಹೊರೆ ಎಸ್ಕಾಂಗಳ(Nalinkumar mocked Siddaramaiah) ಮೇಲೆ ಬಿತ್ತು.
ಕುತ್ತಿಗೆವರೆಗೆ ಮುಳುಗಿದ್ದ ಎಸ್ಕಾಂಗಳನ್ನು ಸಾಲದ ಹೊರೆಯಿಂದ ಮೇಲೆತ್ತಿದ್ದೇವೆ ಎಂದು ಬೆನ್ನು ಚಪ್ಪರಿಸಿಕೊಂಡಿದ್ದೀರಿ, ಸಂತೋಷ. ಸಮಕಾಲೀನ ರಾಜಕಾರಣದ “ಉತ್ತರಪುರುಷ” ಎಂದು ಬಿರುದಾಂಕಿತರಾದ
ನಿಮ್ಮಿಂದ ಇಂಥ ಸುಳ್ಳು ಬಡಾಯಿಗಿಂತ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವೇ? ನೀವು ಎಸ್ಕಾಂಗಳ ಮೇಲೆ ಹೊರಿಸಿ ಹೋದ ಸಾಲದ ಗಂಟನ್ನು ಇಳಿಸಿದ್ದು ನಾವು ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ (Tweet), ವಾರ್ಷಿಕವಾಗಿ ಮತ್ತೆ ೯೦೦೦ ಕೋಟಿ ಸಾಲದ “ಹೂಡಿಕೆ” ಮಾಡುವ ಯೋಚನೆ ನಿಮ್ಮದಾಗಿದೆ. “ಭರವಸೆ ಉಚಿತ, ಸಾಲ ಖಚಿತ” ಎಂಬ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ.
ರೈತರ ಕೃಷಿ ಪಂಪ್ ಸೆಟ್‌ಗಳಿಗೆ ನೀಡಬೇಕಿದ್ದ ವಿದ್ಯುತ್ ಸಬ್ಸಿಡಿಯನ್ನೇ ಬಾಕಿ ಇಟ್ಟು ಹೋದ ಘನ ಸರ್ಕಾರ ತಮ್ಮದ್ದಾಗಿತ್ತು ಎಂಬುದನ್ನು ಮರೆಯದಿರಿ. ಎಲ್ಲ ಆಯಾಮಗಳನ್ನು ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ ೯೦೦೦ ಕೋಟಿ ರೂ. ಬೇಕಾಗುತ್ತದೆ.
ಇದನ್ನೂ ಓದಿ: https://vijayatimes.com/muruli-vijay-turned-to-foreign-teams/
ರಾಜಕೀಯವಾಗಿ ಮರು ಜನ್ಮ ನೀಡಿದ ಬಾದಾಮಿಯನ್ನು ತ್ಯಜಿಸಿ ಕೋಲಾರಕ್ಕೆ ವಲಸೆ ಹೊರಟಿದ್ದೀರಿ. ಇದು ನುಡಿದಂತೆ ನಡೆಯುವ ಪರಿಯಾ ? ನಿಮ್ಮ ಮಾತು, ಕೃತಿ ಒಂದು ರೀತಿಯಲ್ಲಿ “ಹಸ್ತಿ ದಂತ” ಇದ್ದಂತೆ.
ಆನೆಗೆ ಇರುವುದು ಎರಡೇ ದಂತ ಎಂದು ಭಾವಿಸುವುದು ಎಷ್ಟು ಮೂರ್ಖತನವೋ, ಸಿದ್ದರಾಮಯ್ಯಯನವರ ನುಡಿಯಂತೆ ನಡೆ ಎಂಬುದು ಅಷ್ಟೇ ಅಪಾಯಕಾರಿ. ಈ ಕಾರಣಕ್ಕಾಗಿಯೇ ನೀವು ಕತ್ತಲೆಯಲ್ಲಿ ಬಜೆಟ್
ಓದಿದ ಸಂಗತಿಯನ್ನು ನಾನು ನೆನಪು ಮಾಡಿಕೊಂಡಿದ್ದೇನೆ. ನುಡಿದಂತೆ ನಡೆಯುವವರು ನಾವು ಎಂದು ಅತಿಯಾಗಿ ಬೆನ್ನುತಟ್ಟಿಕೊಳ್ಳಬೇಡಿ.
ನಿಮ್ಮ ನಡೆ-ನುಡಿಯೊಳಗಿನ ಕಾಪಟ್ಯ ಎಲ್ಲರಿಗೂ ಗೊತ್ತು. ಇದೇ ನನ್ನ ಕೊನೆಯ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ ? ಎಂದು ಪ್ರಶ್ನಿಸಿದ್ದಾರೆ.