ವಿಜಯಪುರ, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ವಿಮಾನ ನಿಲ್ದಾಣಗಳ ಗಣ್ಯರ ಹೆಸರಿಡಲು ನಿರ್ಧಾರ ; ಏನೆಲ್ಲಾ ಹೆಸರು..?

Belagavi: ರಾಜ್ಯದ ವಿಜಯಪುರ, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, (Vijayapura, Shimoga, Belgaum, Hubli) ವಿಮಾನ (Name proposal Approved-BGM Airport)

ನಿಲ್ದಾಣಗಳಿಗೆ ಗಣ್ಯರ ಹೆಸರಿಡಲು ರಾಜ್ಯ ನಿರ್ಧಾರಿಸಿದ್ದು, ಈ ಕುರಿತ ಪ್ರಸ್ತಾವನೆಯೊಂದನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,

ಬೆಳಗಾವಿಗೆ ಕಿತ್ತೂರು ರಾಣಿ ಚನ್ನಮ್ಮ (Kitturu Rani Channamma), ಶಿವಮೊಗ್ಗಕ್ಕೆ ರಾಷ್ಟ್ರಕವಿ ಕುವೆಂಪು (Kuvempu) ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ

ಅವರ ಹೆಸರಿಡಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರಕಾರ ವಿಧಾನಸಭೆಯಲ್ಲಿ ಮಂಡಿಸಿದ್ದು, ಇದಕ್ಕೆ ರಾಜ್ಯ ವಿಧಾನಸಭೆ ಸರ್ವಾನುಮತದಿಂದ ಗುರುವಾರ

ಅನುಮೋದನೆ ನೀಡಿದೆ.

ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (M B Patil) ಮಂಡಿಸಿದ ನಿಮಾನ ನಿಲ್ದಾಣಗಳಿಗೆ ಹೆಸರಿಡುವ ನಿರ್ಣಯಕ್ಕೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಸರ್ವಾನುಮತದಿಂದ ಅಂಗೀಕಾರ

ನೀಡಿದರು. ರಾಜ್ಯ ಸರ್ಕಾರದ ಈ ನಿರ್ಣಯವನ್ನು ಆರ್. ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಆರಗ ಜ್ಞಾನೇಂದ್ರ (R. Ashok, Basanagouda Patil Yatnal,

Aravinda Bellad, Araga Gyanendra) ಸೇರಿದಂತೆ ಅನೇಕ (Name proposal Approved-BGM Airport) ಶಾಸಕರು ಸ್ವಾಗತಿಸಿದರು.

ಈ ಮಧ್ಯೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು ಎಂದು ಒತ್ತಾಯಿಸಿದರು. ಅದಕ್ಕೆ ಉತ್ತರ ನೀಡಿದ ಸಚಿವ ಎಂ.ಬಿ. ಪಾಟೀಲ್

ಅವರು, ಮಂಗಳೂರು, ಮೈಸೂರು, ಕಲಬುರಗಿ (Mangalore, Mysore, Kalburgi) ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ

ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಆದರೆ ಕಾಂಗ್ರೆಸ್ (Congress) ಶಾಸಕ ಅಬ್ಬಯ್ಯ ಪ್ರಸಾದ್ ಅವರು, ಅರಮನೆ ನಗರಿ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಅವರ ಹೆಸರಿಡಬೇಕು ಎಂದು ಆಗ್ರಹಿಸಿದರು, ಇದಕ್ಕೆ ಬಿಜೆಪಿ

(BJP) ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆಗ ಬಿಜೆಪಿ- ಕಾಂಗ್ರೆಸ್ ಶಾಸಕರ ನಡುವೆ ವಾಗ್ವಾದ ನಡೆಯಿತು.

ಖಾಸಗಿ ನಿರ್ಣಯಕ್ಕೆ ಅನುಮೋದನೆ :
1924ರ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ (Belagavi) ನಡೆದ ರಾಷ್ಟ್ರೀಯ ಕಾಂಗ್ರೆಸ್ನ 39ನೇ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಗಾಂಧೀಜಿ ವಹಿಸಿದ್ದರು. ಈ ಅಧಿವೇಶನ ನಡೆದು 100

ವರ್ಷ ಆಗಲಿದ್ದು, ಆ ಸಮಯದಲ್ಲಿ ಗಾಂಧಿಜೀಯವರು ಭೇಟಿ ನೀಡಿರುವ ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣ ಕೈಗೊಳ್ಳಬೇಕೆಂದು ಬಿಜೆಪಿಯ ಶಾಸಕ ಅಭಯ್ ಪಾಟೀಲ್ (Abhay Patil) ಮಂಡಿಸಿದ

ಖಾಸಗಿ ನಿರ್ಣಯಕ್ಕೆ ವಿಧಾನಸಭೆಯು ಸರ್ವಾನುಮತದ ಅಂಗೀಕಾರ ನೀಡಿತು.

ಇದನ್ನು ಓದಿ: ಡಿಜಿಟಲ್ ಅರೆಸ್ಟ್ ವಂಚನೆ: ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ 3 ಕೋಟಿ ಕಳೆದುಕೊಂಡ 7 ಜನರು

Exit mobile version