Nandini Milk Price increase Again: CM Siddaramaiah Announcement.
Ramanagar: ಮತ್ತೆ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ಹಾಲಿನ ದರ ಏರಿಕೆ ಮಾಡುತ್ತೇವೆ. ಆದರೆ ಈ ಬಾರಿ ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗುವಂತೆ ಮಾಡುತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ವಿಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ ಅವರು, ಗ್ಯಾರಂಟಿ ಯೋಜನೆಗಳನ್ನು(Guarantee Scheme) ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಬಿಜೆಪಿ (BJP) ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಮಾಗಡಿಯಲ್ಲಿ ಉದ್ಘಾಟನೆಯಾದ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳ ಅನುದಾನವನ್ನು ಹೇಗೆ ಮೀಸಲಿಡಲಾಗಿದೆ ಎಂದು ಹೇಳಲಿ? ಬಿಜೆಪಿಯವರು ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಆರೋಪಿಸಿದರು,
ರೈತರಿಗೆ ಹಾಲು ಖರೀದಿಸಿ, ಅವರಿಗೆ ಹಣ ನೀಡುವುದು ಬೇಡವೇ? ಹಾಲಿನ ಪ್ರಮಾಣ ಹೆಚ್ಚಿಸಿ, ಅದಕ್ಕೆ ಸಮನಾಗಿ ಬೆಲೆ ಹೆಚ್ಚಿಸಿ ರೈತರಿಗೆ ನೆರವಾಗಿದ್ದು ತಪ್ಪಾ? ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ.
ಏನೂ ಮಾಡದೇ ಕೆಲವರು ತಾವು ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ ಎಂದು ಹೇಳಿದರು.
ನೆಹರೂ, ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ಮೋದಿ ಅವರು ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗೆ ನೀವು ವೋಟು ನೀಡಿದ್ದೀರ? ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇತ್ತು, ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರ ಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದ್ದರೆ, ಮೋದಿ ಸರ್ಕಾರ ಜನರ ತಲೆಗೆ ಸಾಲವನ್ನು ಹೇರಿದೆ ಎಂದು ಟೀಕಿಸಿದರು.