ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ; ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿ

Bengaluru: ನಂದಿನಿ (Nandini) ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಕರ್ನಾಟಕ ರಾಜ್ಯ ಹಾಲು ಒಕ್ಕೂಟ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಕಾಂಗ್ರೆಸ್ (Congress) ಒಪ್ಪಿಗೆ ಸೂಚಿಸಿದೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಸೇರಿದಂತೆ ಅನೇಕಹಾಲು ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ್ದರು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಆಗಸ್ಟ್ (August) 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಇದಕ್ಕೂ ಮುನ್ನ ಕೆಎಂಎಫ್ ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂಪಾಯಿ ದರ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಇದೀಗ ರಾಜ್ಯ ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ.

ಇನ್ನು ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ (Bhimanayka) , ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಮಾಲೂರು ಶಾಸಕ ನಂಜೇಗೌಡ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ (N.Manjunath Prasad), ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಕೆಎಂಎಫ್ ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸಭೆಯಲ್ಲಿ ಭಾಗಿಯಾಗಿದ್ದರು.

ಇನ್ನು ಹಾಲಿನ ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯುಂಟಾಗಿದ್ದು, ಇದೀಗ ಹಾಲಿನ ದರವನ್ನು ಹೆಚ್ಚಳ ಮಾಡಿರುವುದು ಮದ್ಯಮವರ್ಗದ ಮೇಲೆ ಮತ್ತಷ್ಟು ಹೊರೆಯುಂಟು ಮಾಡಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಗ್ಯಾರಂಟಿ (Guarantee) ಯೋಜನೆಗಳಿಗೆ ಹಣ ಹೊಂದಿರುವ ನಿಟ್ಟಿನಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದು, ಇದೀಗ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಸಂಪನ್ಮೂಲ ಸಂಗ್ರಹಣೆ ಮಾಡುವ ಗುರಿಯನ್ನು ಹೊಂದಿದೆ. ಕೆಎಂಎಫ್ ಮೇಲಿನ ಹೊರೆಯನ್ನು ಕೆಎಂಎಫ್ ಸಂಸ್ಥೆಯೇ ಭರಿಸುವ ಸಲುವಾಗಿ ದರ ಹೆಚ್ಚಳ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

Exit mobile version