Mandya : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಮರಳಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಭಾರೀ (narayana gowda joining congress) ರಣತಂತ್ರಗಳನ್ನೇ ಹೆಣೆಯುತ್ತಿದೆ.
ಕಳೆದ ಒಂದು ವರ್ಷದಿಂದಲೇ ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಬೇಕೆಂದು ಕೇಂದ್ರ ಬಿಜೆಪಿ (BJP)ನಾಯಕರು ರಾಜ್ಯ ಬಿಜೆಪಿ ನಾಯಕರಿಗೆ ಟಾರ್ಗೆಟ್ ನೀಡುತ್ತಲೇ ಬಂದಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲವಾಗದ ಹೊರತು, ಸ್ವತಂತ್ರವಾಗಿ ಅಧಿಕಾರ ಹಿಡಿಯುವುದು ಕಷ್ಟ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.

ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲಗೊಳಿಸಬೇಕೆಂದು ಅನೇಕ ತಂತ್ರಗಳನ್ನು ಹೆಣೆಯುತ್ತಿರುವ ಬಿಜೆಪಿಗೆ ಇದೀಗ ಹೊಸ ಸಂಕಷ್ಟವೊಂದು ಎದುರಾಗಿದೆ.
ಮಾರ್ಚ್11ರಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆ ಮಾಡಲು ಪ್ರಧಾನಿ ಮೋದಿ (Modi) ಮಂಡ್ಯಕ್ಕೆ ಬರುತ್ತಿದ್ದಾರೆ.
ಇದಕ್ಕೂ ಮುನ್ನವೇ ಹಾಲಿ ಬಿಜೆಪಿ ಸಚಿವ ಕೆ.ಸಿ.ನಾರಾಯಣಗೌಡ(K.C.Narayana Gowda) ಪಕ್ಷ ತೊರೆದು,
ಕಾಂಗ್ರೆಸ್ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ಮೋದಿ ಮಂಡ್ಯಕ್ಕೆ ಭೇಟಿ ನೀಡುವುದಕ್ಕೂ ಮುನ್ನವೇ ನಾರಾಯಣ ಗೌಡರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ, ಬಿಜೆಪಿಗೆ ಮುಖಭಂಗ ಉಂಟು ಮಾಡುವ ರಾಜಕೀಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಹೆಣೆದಿದೆ.

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ನಾಯಕತ್ವದ ಕೊರತೆಯಿದೆ. ಸಚಿವರಾಗಿದ್ದರೂ ಕೆ.ಆರ್.ಪೇಟೆಯಲ್ಲಿ(K.R.Pete) ಮರಳಿ ಗೆಲ್ಲುವ ವಿಶ್ವಾಸವನ್ನು ನಾರಾಯಣಗೌಡ ಹೊಂದಿರುವಂತೆ ಕಾಣುತ್ತಿಲ್ಲ.
ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ಜೆಡಿಎಸ್ ಅಭ್ಯರ್ಥಿಯನ್ನು ಎದುರಿಸುವುದು ಕಷ್ಟ ಎಂಬುದು ನಾರಾಯಣಗೌಡರ (narayana gowda joining congress) ಲೆಕ್ಕಾಚಾರ.
ಹೀಗಾಗಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ, ಪ್ರಬಲ ಹೋರಾಟ ನಡೆಸಬಹುದು. ಕೆ.ಆರ್.ಪೇಟೆಯಲ್ಲಿ ಸದ್ಯಕ್ಕೆ ಕಾಂಗ್ರೆಸ್‌ಗೆ ಅಭ್ಯರ್ಥಿಯ ಕೊರತೆಯಿದೆ.
ನಾನೇ ಅಭ್ಯರ್ಥಿಯಾದರೆ, ಕಾಂಗ್ರೆಸ್‌ಮತಗಳು ನನ್ನ ಕೈಹಿಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚು ಎಂಬ ಆಲೋಚನೆಯಲ್ಲಿ ನಾರಾಯಣಗೌಡರಿದ್ದಾರೆ.
ಮೂಲಗಳ ಪ್ರಕಾರ, ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಸಿದ್ದತೆ ಮಾಡಿಕೊಂಡಿದ್ದಾರೆ.
ಈಗಾಗಲೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar)ಅವರೊಂದಿಗೂ ಮಾತನಾಡಿದ್ದು,
ಡಿಕೆಶಿ ಗ್ರೀನ್‌ಸಿಗ್ನನ್ (Green Signal)ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಿಂದ ಆಹ್ವಾನ ಬಂದಿರೋದು ನಿಜ.
ಆದರೆ ನನ್ನ ಆಪ್ತರು ಹಾಗೂ ಹಿತೈಷಿಗಳ ಜೊತೆ ಚರ್ಚಿಸಿ, ಮಾಧ್ಯಮಗಳ ಮೂಲಕವೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸೇರುವ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ.
-ಮಹೇಶ್.ಪಿ.ಎಚ್