ಬೆಂಗಳೂರೂ ಸೆ 01 : ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ 2% ಗಳಷ್ಟು ಮೀಸಲಾತಿ ನೀಡಲಾಗುವುದು ಎಂದು ಕ್ರೀಡಾ ಸಚಿವ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಕ್ರೀಡಾ ಕೋಟಾದಡಿ 2% ಗಳಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ. ಅದರಂತೆಯೇ ಎಲ್ಲಾ ಕ್ಷೇತ್ರಗಳಲ್ಲೂ ಕೂಡ ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಶೇ2% ಉದ್ಯೋಗ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುಲಾಗುವುದ ಎಂದು ತಿಳಿಸಿದರು
ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಬಾಲಕಿಯರ ಕ್ರೀಡಾ ವಸತಿ ನಿಲಯಗಳನ್ನು ಆರಂಭಿಸಲಾಗುವುದು. ಮುಂದಿನ ಒಲಿಂಪಿಕ್‌ಗೆ ಅಮೃತ ಕ್ರೀಡಾ ದತ್ತು ಯೋಜನೆಯಡಿ 75 ಕ್ರೀಡಾಪಟುಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಿದ್ದೇವೆ. ಎಲ್ಲರಿಗೂ ವಿಶ್ವಮಟ್ಟದ ತರಬೇತಿ ಒದಗಿಸಲಾಗುವುದು ಕರ್ನಾಟಕದಿಂದ ಹೆಚ್ಚು ಕ್ರೀಡಾಪಟುಗಳನ್ನು ಒಲಂಪಿಕ್ಸ್‌ಗೆ ಕಳುಹಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.