Visit Channel

ಇಂದು ಮೋದಿ ಬೆಂಗಳೂರಿಗೆ : ಎಲ್ಲಿ ಸಂಚಾರ ನಿಷೇಧ..? ಪರ್ಯಾಯ ಮಾರ್ಗಗಳ ವಿವರ!

narendra

ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಮೊದಲ ದಿನ ಬೆಂಗಳೂರಿಗೆ(Bengaluru) ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ವಾಹನ ಸವಾರರಿಗೆ ಟ್ರಾಫಿಕ್(Traffic) ಕಿರಿಕಿರಿ ಉಂಟಾಗುವ ಸಾಧ್ಯತೆಯಿದೆ. ನಗರದ ಹಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಅದೆಲ್ಲದರ ವಿವರ ಇಲ್ಲಿದೆ ನೋಡಿ.

India

ಈ ಎಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ
ಇಂದು ಮಧ್ಯಾಹ್ನ 12:30 ರಿಂದ 3:00 ಗಂಟೆಯವರೆಗೆ ಈ ಕೆಳಗಿನ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ.
 ಕೆಂಗುಂಟೆ ಜಂಕ್ಷನ್ – ನಮ್ಮೂರ ತಿಂಡಿ – ನಾಗರಭಾವಿ ರಿಂಗ್ ರಸ್ತೆ ಕಡೆಗೆ ಸಂಚಾರ ನಿಷೇಧ.
 ನಾಗರಭಾವಿ ಸರ್ಕಲ್‍ಂದ ಜ್ಞಾನಭಾರತಿ ಆಡ್ಮಿನ್ ಬ್ಲಾಕ್ ಜಂಕ್ಷನ್‍ರೆಗೆ ನಿಷೇಧ.
 ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಕೆಂಗೇರಿ ಉತ್ತರಹಳ್ಳಿ ರಸ್ತೆ ಕಡೆಯಿಂದ ಕೆಂಗೇರಿ, ಮೈಸೂರು ಕಡೆಗೆ ನಿಷೇಧ
 ಮೈಸೂರು ರಸ್ತೆ ಜ್ಞಾನಭಾರತಿ ಜಂಕ್ಷನ್‍ಂದ ಯುನಿವರ್ಸಿಟಿ ಕಡೆಗೆ
 ತುಮಕೂರು ರಸ್ತೆಯ ನಗರದ ಒಳಭಾಗಕ್ಕೆ ಬರುವ ವಾಹನಗಳಿಗೆ ನಿಷೇಧ

PM

ಪರ್ಯಾಯ ಸಂಚಾರ ಮಾರ್ಗಗಳು :

 ಆರ್.ಆರ್.ಆರ್ಚ್, ನಾಯಂಡಹಳ್ಳಿ ಜಂಕ್ಷನ್ – ನಾಗರಭಾವಿ ಕಡೆಗೆ
 ನೈಸ್ ರಸ್ತೆ ಮುಖಾಂತರ ನೈಸ್ ಕಛೇರಿ – ಸೋಂಪುರ ಟೋಲ್ ಉತ್ತರಹಳ್ಳಿ ಮುಖ್ಯ ರಸ್ತೆ – ಸೋಂಪುರ ಟೋಲ್ ಮುಖಾಂತರ ಮೈಸೂರು ಕಡೆಗೆ ಅವಕಾಶ
 ತುಮಕೂರು ಕಡೆಯಿಂದ ಯಲಹಂಕ, ಕೋಲಾರ, ಹೈದರಬಾದ್ ಕಡೆಗೆ ಸಂಚರಿಸುವ ವಾಹನಗಳು ದಾಬಸ್ ಪೇಟೆಯಲ್ಲಿ ಎಡತಿರುವು ಪಡೆದು ದೊಡ್ಡಬಳ್ಳಾಪುರ ಮುಖ್ಯರಸ್ತೆ ಮುಖಾಂತರ
 ನಾಗರಭಾವಿ ಸರ್ಕಲ್-ನಮ್ಮೂರ ತಿಂಡಿ ಹೋಟೆಲ್-ಅಂಬೇಡ್ಕರ್ ಕಾಲೇಜ್ ಜಂಕ್ಷನ್- ಜ್ಞಾನಭಾರತಿ ಗೇಟ್ ಕಡೆಗೆ ಅವಕಾಶ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.