ಇಂದು ಅಮೆರಿಕಾಕ್ಕೆ ಪ್ರಯಾಣ ಬೆಳೆಸಲಿರುವ ಮೋದಿ

ನವದೆಹಲಿ, ಸೆ. 22: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಅಮೆರಿಕಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಈ ವೇಳೆ ಅವರು ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಅವರನ್ನು ಹಾಗೂ ಅಮೆರಿಕದ ಉಪಾಧ್ಯಕ್ಷ  ಭಾರತ ಮೂಲದ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗಲಿದ್ದಾರೆ ಜೊತೆಗೆ ಅಮೆರಿಕಾದ ಉನ್ನತ ಸಂಸ್ಥೆಗಳ ಸಿಇಓ ಗಳ ಜೊತೆ ಸಭೆ ನಡೆಸಲಿದ್ದಾರೆ.ಮತ್ತು ಕ್ವಾಡ್ ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ‌ ಕೂಡ ಭಾಗಿಯಾಗಲಿದ್ದಾರೆ.

ಈ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಇಂದು ದೆಹಲಿಯಿಂದ ವಾಷಿಂಗ್ಟನ್ ಪ್ರಯಾಣ ಬೆಳಸಲಿರುವ ಪ್ರಧಾನಿ ಮೋದಿ, ನಾಳೆ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಓ ಗಳ ಜತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ ಅವರು ಆ್ಯಪಲ್ ಸಂಸ್ಥೆ ಮುಖ್ಯಸ್ಥ ಟಿಮ್ ಕುಕ್ ಅವರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.


ಇದರ ಬಳಿಕ  ಸೆಪ್ಟೆಂಬರ್ 24ಕ್ಕೆ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಜೊತೆ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಕ್ವಾಡ್ ದೇಶಗಳ ಪ್ರಧಾನ ಮಂತ್ರಿಗಳಾದ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮೋರಿಸನ್, ಜಪಾನ್ ಪ್ರಧಾನ ಮಂತ್ರಿ ಯೊಶಿಹಿಡೆ ಸುಗ  ಮತ್ತು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರೊಂದಿಗೂ ಕೂಡ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ .ಸಭೆಯ ಬಳಿಕ‌ ಕ್ವಾಡ್ ದೇಶಗಳ ನಾಯಕರ‌ ಭೋಜನಕೂಟ ದಲ್ಲಿ ಪಾಲ್ಗೊಳ್ಳಲಿದ್ದಾರೆ.ಈ ಬಳಿಕ ಸೆಪ್ಟೆಂಬರ್ 25ರಂದು ನ್ಯೂಯಾರ್ಕ್ ನಗರದಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ. ಎಂದು ಪ್ರಧಾನಿ ಕಾರ್ಯಲಯ ಸ್ಪಷ್ಟಪಡಿಸಿದೆ.

Exit mobile version