ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಚರ್ಚೆಗೆ ಸರ್ಕಾರ ಸಿದ್ದ – ಬೊಮ್ಮಾಯಿ

ಬೆಂಗಳೂರು ಸೆ 15 : ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಒತ್ತಡಕ್ಕೆ ಒಳಗಾಗಬೇಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಪ್ರಸ್ತುತ ಕಾಲಕ್ಕೆ ತಕ್ಕ ಹಾಗೆ ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಮತ್ತು ಪ್ರೌಢಶಿಕ್ಷಣದ ಬಗ್ಗೆ ಸಮಿತಿ ರಚಿಸಿ ಅನುಷ್ಠಾನದ ಬಗ್ಗೆ ತೀರ್ಮಾನಿಸಲಾಗುವುದು. ಈ ಬಗ್ಗೆ ಯಾರೂ ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಸಿಎಂ ತಿಳಿಸಿದರು.

ಸಮಗ್ರ ಚರ್ಚೆ ನಡೆಸದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಿನ್ನೆ  ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿಚಾರ್ಜ್‌ ನಡೆಸಿದ್ದರು.

Exit mobile version