Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಭಾರತದಿಂದ ಬರುವವರಿಗೆ ಪ್ರವೇಶ ನಿರ್ಬಂಧಿಸಿದ ನ್ಯೂಜಿಲ್ಯಾಂಡ್

ಏಪ್ರಿಲ್​ 11ರಿಂದ ಏಪ್ರಿಲ್​ 28ರವರೆಗೆ ಭಾರತದಿಂದ ಬರುವವರಿಗೆ ನಿರ್ಬಂಧ ಹೇರಲಾಗಿದ್ದು, ಭಾರತದಲ್ಲಿರುವ ನ್ಯೂಜಿಲೆಂಡ್ ನಾಗರಿಕರಿಗೂ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ದಕ್ಷಿಣ ಏಷ್ಯಾ ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದ್ದು, ನ್ಯೂಜಿಲ್ಯಾಂಡ್​ನಲ್ಲಿ ಪತ್ತೆಯಾಗಿರುವ 23 ಹೊಸ ಕೊರೊನಾ ಪ್ರಕರಣಗಳ ಪೈಕಿ 17 ಸೋಂಕಿತರು ಭಾರತದಿಂದ ಆಗಮಿಸಿದ್ದರು
Share on facebook
Share on google
Share on twitter
Share on linkedin
Share on print

ನ್ಯೂಜಿಲೆಂಡ್‌, ಏ. 08: ವರ್ಷದ ಹಿಂದೆ ಕೊರೊನಾ ಮೊದಲ ಬಾರಿಗೆ ಕಾಣಿಸಿಕೊಂಡಾಗ ಅದನ್ನು ಕಟ್ಟಿಹಾಕುವಲ್ಲಿ ಯಶಸ್ಸು ಕಂಡಿದ್ದ ಪುಟ್ಟ ದ್ವೀಪ ರಾಷ್ಟ್ರ ನ್ಯೂಜಿಲೆಂಡ್ ಈ ಬಾರಿ ಕೊರೊನಾ ಎರಡನೆಯ ಅಲೆಗೆ ತತ್ತರಿಸಿದೆ. ಈ ಮಧ್ಯೆ, ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ತಾರಕಕ್ಕೇರುವ ಕುರಿತು ಆತಂಕ ಶುರುವಾಗಿದ್ದು, ಅನೇಕ ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಜಾರಿಗೊಳಿಸಿವೆ. ಇದರ ಮಧ್ಯೆ, ಭಾರತದಲ್ಲಿ ಸೋಂಕು ಹೆಚ್ಚಿರುವ ಕಾರಣ ಭಾರತೀಯ ಪ್ರಯಾಣಿಕರ ಆಗಮನಕ್ಕೆ ನ್ಯೂಜಿಲೆಂಡ್ ನಿರ್ಬಂಧ ಹೇರಿದೆ. ಈ ಬಗ್ಗೆ ನ್ಯೂಜಿಲೆಂಡ್ ಪ್ರಧಾನಮಂತ್ರಿ ಜಸಿಂದಾ ಅರ್ಡೆರ್ನ್ ಆದೇಶ ಹೊರಡಿಸಿದ್ದು, ಭಾರತದಿಂದ ಆಗಮಿಸುವ ಯಾವುದೇ ಪ್ರಯಾಣಿಕರಿಗೂ ನ್ಯೂಜಿಲೆಂಡ್ ಪ್ರವೇಶಿಸಲು ಅನುಮತಿ ಇಲ್ಲ ಎಂದಿದ್ದಾರೆ.

ಏಪ್ರಿಲ್​ 11ರಿಂದ ಏಪ್ರಿಲ್​ 28ರವರೆಗೆ ಭಾರತದಿಂದ ಬರುವವರಿಗೆ ನಿರ್ಬಂಧ ಹೇರಲಾಗಿದ್ದು, ಭಾರತದಲ್ಲಿರುವ ನ್ಯೂಜಿಲೆಂಡ್ ನಾಗರಿಕರಿಗೂ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ದಕ್ಷಿಣ ಏಷ್ಯಾ ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದ್ದು, ನ್ಯೂಜಿಲ್ಯಾಂಡ್​ನಲ್ಲಿ ಪತ್ತೆಯಾಗಿರುವ 23 ಹೊಸ ಕೊರೊನಾ ಪ್ರಕರಣಗಳ ಪೈಕಿ 17 ಸೋಂಕಿತರು ಭಾರತದಿಂದ ಆಗಮಿಸಿದ್ದರು ಎಂಬುದು ಬಹಿರಂಗವಾದ ಬೆನ್ನಲ್ಲೇ ನ್ಯೂಜಿಲ್ಯಾಂಡ್ ಈ ನಿರ್ಧಾರಕ್ಕೆ ಮುಂದಾಗಿದೆ.

Submit Your Article