• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರರಾಜಕಾರಣಕ್ಕೆ ಸಿದ್ಧರಾಮಯ್ಯರಂತಹ ನಾಯಕರ ಅಗತ್ಯ ಇದೆ: ಹೆಚ್.ಡಿ ದೇವೆಗೌಡ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ರಾಷ್ಟ್ರರಾಜಕಾರಣಕ್ಕೆ ಸಿದ್ಧರಾಮಯ್ಯರಂತಹ ನಾಯಕರ ಅಗತ್ಯ ಇದೆ: ಹೆಚ್.ಡಿ ದೇವೆಗೌಡ
0
SHARES
0
VIEWS
Share on FacebookShare on Twitter

ನವದೆಹಲಿ, ಮಾ. 01: ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅಚ್ಚರಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ತಮ್ಮ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ದೇವಗೌಡರು ಪತ್ರಕರ್ತರೊಂದಿಗೆ ಮಾತನಾಡಿದ ‘ಒಂದು ಕಾಲದ ತಮ್ಮ ಕಿರಿಯ ಸ್ನೇಹಿತ’ ಸಿದ್ದರಾಮಯ್ಯ ಬಗ್ಗೆ ಅಚ್ಚರಿಯ ಮಾತುಗಳನ್ನು ಹೊರ ಹಾಕಿದರು. ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಈಗ ಆ ಪಕ್ಷದ ಹಿರಿಯ ನಾಯಕರು ಬಂಡೆದ್ದಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಗುಲಾಂ ನಭಿ ಆಜಾದ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆ ಚೆನ್ನಾಗಿದ್ದಾರೆ. ಈ ಹಿರಿಯ ನಾಯಕರು ಬದಿಗೆ ಸರಿದ ಬಳಿಕ ಕಾಂಗ್ರೆಸ್ ಅನ್ನು ಸದೃಢಗೊಳಿಸಲು ಸಿದ್ದರಾಮಯ್ಯ ಅವರಂತಹ ನಾಯಕರ ಅಗತ್ಯ ಇದೆ ಎಂದು ಹೇಳಿದರು.

ದೇವೇಗೌಡರು ದಿಢೀರನೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಬಗ್ಗೆ ತೋರಿದ ಕಾಳಜಿ – ಪ್ರೀತಿಗಳಿಂದ ಪತ್ರಕರ್ತರು ಕಕ್ಕಾಬಿಕ್ಕಿಯಾದದ್ದೂ ಉಂಟು. ಸಾವರಿಸಿಕೊಂಡು ಕೇಳಿದಾಗಲೂ ದೇವೇಗೌಡರು ನೀಡಿದ ಅಭಿಪ್ರಾಯ ‘ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಸಿದ್ದರಾಮಯ್ಯ ಅವರಂತಹ ನಾಯಕರು‌ ರಾಷ್ಟ್ರ ರಾಜಕಾರಣಕ್ಕೆ ಬರಬೇಕು’ ಎಂಬುದೇ ಆಗಿತ್ತು.

ಇದೇ ವೇಳೆ ದೇವೇಗೌಡರು ಮೈಸೂರು ಮೇಯರ್ ಚುನಾವಣೆಯಲ್ಲಿ ‌ನಡೆದ ಘಟನೆ ಬಗ್ಗೆ ಮಾತನಾಡುವಾಗ ಮಾತ್ರ ‘ಸಿದ್ದರಾಮಯ್ಯ ಅವರದೇ ಎಲ್ಲಾ ಪ್ರಮಾದ’ ಎಂದರು.  ಅದಕ್ಕಾಗಿ 2018ರಿಂದ ಈವರೆಗೆ ಏನೇನಾಯಿತು ಎಂದು ವಿವರಿಸಿದರು. “2018ರಲ್ಲಿ ಮೈಸೂರು ಮೇಯರ್ ಪಟ್ಟ ಗಿಟ್ಟಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ ಪಟ್ಟಿದ್ದರು. ಜೆಡಿಎಸ್ 25 ಸದಸ್ಯರನ್ನು ಗೆದ್ದಿದ್ದರೂ ಸಿದ್ದರಾಮಯ್ಯ ಅವರ ಭಾವನೆಯನ್ನು ಅರ್ಥ ಮಾಡಿಕೊಂಡು ನಾನೇ ಮೈಸೂರಿನಲ್ಲಿ ಮೇಯರ್ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಕೊಡಿ ಎಂದು ಹೇಳಿದ್ದೆ. ಅದಾದ ಮೇಲೆ ನಮಗೆ ಬಿಟ್ಟುಕೊಟ್ಟಿದ್ದರು. ಈ ಬಾರಿ ಕೂಡ ಸಿದ್ದರಾಮಯ್ಯ ಅವರು ಹಠ ಮಾಡಿದರೆ ಮೇಯರ್ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಕೊಡಿ ಎಂದು ನಮ್ಮ ಪಕ್ಷದ ಸ್ಥಳೀಯ ನಾಯಕರಿಗೆ ಸೂಚಿಸಿದ್ದೆ.‌ ಕಡೆಯ 2 ವರ್ಷ ನಾವು ಇಟ್ಟುಕೊಳೋಣ, ಚುನಾವಣೆಗೆ ಅಣಿಯಾಗೋಣ ಎಂದು ಕೂಡ ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ” ಎಂದು ಹೇಳಿ ಮತ್ತೊಮ್ಮೆ ಅಚ್ಚರಿ ಮೂಡಿಸಿದರು.

ಸಿದ್ದರಾಮಯ್ಯ ಅವರು ಮೇಯರ್ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದರು. ಅದಕ್ಕಾಗಿ ಜೆಡಿಎಸ್ ಸದಸ್ಯರನ್ನು ಆಪರೇಷನ್ ಹಸ್ತ ಮಾಡುವುದಕ್ಕೂ ಪ್ರಯತ್ನಿಸಿದ್ದರು. ಅವರು 18 ಸದಸ್ಯರನ್ನು ಇಟ್ಟುಕೊಂಡು, ಜೊತೆಗೆ ನಮ್ಮವರನ್ನು ಸೆಳೆದು ಮೇಯರ್ ಸ್ಥಾನ ಪಡೆದುಕೊಳ್ಳಲು ಪ್ರಯತ್ನಿಸಿದರು. ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಆಪರೇಷನ್ ಮಾಡಲು ಭಾರೀ ಪ್ರಯತ್ನ ಮಾಡಿದರು. ಆದರೆ ಅದರಲ್ಲಿ ಯಶಸ್ವಿಯಾಗಲಿಲ್ಲ ಎಂಬ ಹೊಸ ವಿಷಯಗಳನ್ನು ಹೊರ ಹಾಕಿದರು.

ಎಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲೇ ಉಳಿದುಕೊಂಡು ನಮ್ಮ‌ಪಕ್ಷದ ಸದಸ್ಯರು ‘ಆಪರೇಷನ್ ಹಸ್ತ‌’ ಆಗುವುದನ್ನು ತಡೆದರು.‌ ಸಿದ್ದರಾಮಯ್ಯ ಅವರ ಲೆಕ್ಕಾಚಾರ ಕೈ ಕೊಟ್ಟ ಬಳಿಕ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರು ‘ಬಿಜೆಪಿಗೆ ಮೇಯರ್ ಸ್ಥಾನ ಬಿಟ್ಟುಕೊಡಬಾರದು ಎಂದು ಜೆಡಿಎಸ್ ಅನ್ನೇ ಬೆಂಬಲಿಸಲು ನಿರ್ಧಾರ ಮಾಡಿದ್ದಾರೆ. ಇವೆಲ್ಲವುಗಳ ಬದಲಿಗೆ ಸಿದ್ದರಾಮಯ್ಯ ಅವರೇ ನನ್ನ ಜೊತೆ ಮಾತನಾಡಬಹುದಿತ್ತು. ಕುಮಾರಸ್ವಾಮಿ ಜೊತೆ ಮಾತನಾಡಬಹುದಿತ್ತು. ಕಡೆಯ ಪಕ್ಷ ನಮ್ಮ ಸ್ಥಳೀಯ ಮುಖಂಡ ಸಾ.ರಾ. ಮಹೇಶ್ ಜೊತೆ ಮಾತನಾಡಬಹುದಿತ್ತು’ ಎಂದು ಹೇಳಿದರು.

ಇದಲ್ಲದೆ ‘ದೇವೇಗೌಡರು ಜಾತ್ಯತೀತ ವಿಷಯದಲ್ಲಿ ಯಾವತ್ತೂ ಮಾರ್ಪಾಡಾಗಲ್ಲ’ ಎಂದು ಪುನರುಚ್ಛರಿಸಿದರು. ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿ ಆಗುವುದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಇವರು ಮಾತಿನಂತೆ ನಡೆದುಕೊಳ್ಳದ ಕಾರಣ ಶಾಸಕರು ಸಿಡಿದೆದ್ದು ಹೊರಟ್ಟಿಯವರನ್ನು ಬೆಂಬಲಿಸಿದ್ದಾರೆ. ಇದು ವಾಸ್ತವವಾಗಿ ನನಗೆ ಆಗಿರುವ ಹಿನ್ನಡೆ ಕೂಡ ಹೌದು’ ಎಂದೂ ಹೇಳಿದರು.

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.