ಅಕ್ರಮ ಆಸ್ತಿಗಳಿಕೆ ; ಶಾಸಕ ಜಮೀರ್‌ ಅಹಮ್ಮದ್‌ ಮನೆ ಮೇಲೆ ಎಸಿಬಿ ದಾಳಿ

ncb

ಬೆಂಗಳೂರು : ಚಾಮರಾಜಪೇಟೆಯ(Chamrajpet) ಕಾಂಗ್ರೆಸ್‌ ಶಾಸಕ(Congress MLA) ಜಮೀರ್‌ ಅಹಮ್ಮದ್‌ ಖಾನ್‌(Zameer Ahmed Khan) ಮನೆ ಮೇಲೆ ಇಂದು ಬೆಳಿಗ್ಗೆಯೇ ಭ್ರಷ್ಟಾಚಾರ ನಿಗ್ರಹ ದಳ(NCB) ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಆರೋಪದ ಮೇಲೆ ಜಮೀರ್‌ ಅಹಮ್ಮದ್‌ ಖಾನ್‌ ಮನೆ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಅವರಿಗೆ ಸಂಬಂಧಿಸಿರುವ ಬೆಂಗಳೂರಿನ(Bengaluru) ಐದು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಜಮೀರ್‌ ಅಹಮ್ಮದ್‌ ಅವರಿಗೆ ಸೇರಿರುವ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಭವ್ಯ ಬಂಗಲೆ ಮೇಲೆಯೂ ದಾಳಿ ನಡೆಸಲಾಗಿದೆ. ಇನ್ನು ಕಳೆದ ವರ್ಷ ಜಾರಿ ನಿರ್ದೇಶನಾಲಯ(ED) ಕೂಡಾ ಜಮೀರ್‌ ಅಹಮ್ಮದ್‌ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಈ ದಾಖಲೆಗಳ ಆಧಾರದ ಮೇಲೆಯೇ ಇಂದು ಎಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ.

ಆರು ತಿಂಗಳ ಹಿಂದೆ ಇಡಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದರು. ಸರ್ಕಾರಿ ಯೋಜನೆಯೊಂದರಲ್ಲಿ ಬಾರಿ ಅವ್ಯವಹಾರ ಆಗಿರುವ ದಾಖಲೆಗಳನ್ನು ಇಡಿ ಅಧಿಕಾರಿಗಳು ಕಲೆ ಹಾಕಿದ್ದರು. ಹೀಗಾಗಿ ಇದೀಗ ಎಸಿಬಿ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆʼ ಅಡಿಯಲ್ಲಿ ಪ್ರಕರಣ ದಾಖಲಿಸಿ ದಾಳಿ ನಡೆಸಿದೆ. ಶಾಸಕ ಜಮೀರ್‌ ಅವರಿಗೆ ಸೇರಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಿ ಕೆ ಅಸೋಸಿಯೇಟ್ಸ್ ಕಚೇರಿ, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್, ರೈಲ್ವೆ ಕಂಟೋನ್ಮೆಂಟ್ ಬಳಿಯಿರುವ ಭವ್ಯ ಬಂಗಲೆ ಮೇಲೆ ಎಸಿಬಿ ದಾಳಿ ನಡೆಸಿದೆ.

ಇನ್ನು ಶಾಸಕ ಜಮೀರ್ ಅಹಮ್ಮದ್‌ ದುಬೈನಲ್ಲಿ(Dubai) ಅಕ್ರಮವಾಗಿ ಆಸ್ತಿ ಹೊಂದಿದ್ದಾರೆ ಮತ್ತು ಐಎಂಎ ಹಗರಣದ(IMI Scam) ಆರೋಪಿ ಮನ್ಸೂರ್ ಖಾನ್ ಜೊತೆ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ.

Exit mobile version