ನಮಗೆ ಕುಲಪತಿ ಬೇಕು, ಸಾವರ್ಕರ್‌ ಅಲ್ಲ: ಬ್ಯಾನರ್ ಪ್ರದರ್ಶಿಸಿ ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Kerala: ಕೇರಳದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಪಿಣರಾಯಿ ವಿಜಯನ್ (need chancellor not Savarkar) ನೇತೃತ್ವದ ಎಡರಂಗ ಸರ್ಕಾರದ ನಡುವಿನ ಕಿತ್ತಾಟ ಮುಂದುವರೆದಿದ್ದು,

Pinarayi Vijayan

ಸದ್ಯಕ್ಕೆ ಇದು ಕೊನೆಗೊಳ್ಳುವ ಯಾವುದೇ ಲಕ್ಷಣ ಕಾಣುತಿಲ್ಲ.

ಸ್ಟೂಡೆಂಟ್ ಫೆಡರೇಶನ್‌ ಆಫ್ ಇಂಡಿಯಾ (ಎಸ್‌ಎಫ್‌ಐ) (SFI) ಕಾರ್ಯಕರ್ತರು ತಮ್ಮನ್ನು ಗೂಂಡಾಗಳು ಕ್ರಿಮಿನಲ್‌ಗಳು ಎಂದಿರುವ ರಾಜ್ಯಪಾಲರ ವಿರುದ್ಧ ರೊಚ್ಚಿಗೆದ್ದಿರುವ ಕಳೆದ ಒಂದು ವಾರದಿಂದ

ರಾಜ್ಯಪಾಲರು (Governor) ಹೋದಲ್ಲಿ ಬಂದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದು, ಕಳೆದ ಮಂಗಳವಾರ ರಾಜ್ಯಪಾಲರು ಚಿಕಿತ್ಸೆಯ ಸಲುವಾಗಿ ತಿರುವನಂತಪುರಂನ ಮೆಡಿಕಲ್‌ ಕಾಲೇಜಿಗೆ ತೆರಳಿದ್ದರು.

ಈ ವಿಷಯ ತಿಳಿದು ಕಾಲೇಜು ಬಳಿ ಬಂದ ಎಸ್‌ಎಫ್‌ಐ ಕಾರ್ಯಕರ್ತರು, ‘ನಮಗೆ ಕುಲಪತಿ ಬೇಕು, ಸಾವರ್ಕರ್ ಅಲ್ಲ’ ಎಂಬ ಬ್ಯಾನರ್ ಪ್ರದರ್ಶಿಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,

ವಿದ್ಯಾರ್ಥಿಗಳ ಈ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ಅವರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಆಗ್ರಹಿಸಿ ರಾಷ್ಟ್ರಪತಿ ದ್ರೌಪದಿ

ಮುರ್ಮು (President Draupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಗುರುವಾರ ಸಿಎಂ ಪಿಣರಾಯಿ ವಿಜಯನ್‌ (Pinarayi Vijayan) ಪತ್ರ ಬರೆದಿದ್ದಾರೆ.

ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪದೇ ಪದೇ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಸಿಎಂ ತನ್ನ ಪತ್ರದಲ್ಲಿ ಆರೋಪಿಸಿದ್ದಾರೆ. ಡಿಸೆಂಬರ್

11ರಂದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯಪಾಲ

ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿಗೆ ಮುತ್ತಿಗೆ (need chancellor not Savarkar) ಹಾಕಿದ್ದರು.

Arif Mohammed Khan

ದೆಹಲಿಗೆ ಪ್ರಯಾಣಿಸಲು ರಾಜ್ಯಪಾಲರು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ (Thiruvananthapuram Airport) ತೆರಳುವ ದಾರಿ ಮಧ್ಯೆ ಈ ಘಟನೆ ನಡೆದಿತ್ತು. ತಕ್ಷಣ ಕಾರಿನಿಂದ

ಕೆಳಗಿಳಿದಿದ್ದ ರಾಜ್ಯಪಾಲರು, ಸಿಎಂ ಕಳಿಸಿದ ಗೂಂಡಾಗಳು ನನ್ನ ಮೇಲೆ ದಾಳಿಗೆ ಯತ್ನಿಸಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶ ಅವರಿಗಿತ್ತು ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು.

ಇನ್ನು ಈ ರೀತಿಯ ಆರೋಪವನ್ನು ತಮ್ಮ ಮೇಲೆ ಹೊರಿಸಿದ ರಾಜ್ಯಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಎಸ್‌ಎಫ್‌ಐ ಕಾರ್ಯಕರ್ತರು, ಕ್ಯಾಲಿಕಟ್ ವಿಶ್ವ ವಿದ್ಯಾನಿಲಯದ (University of Calicut)

ಅತಿಥಿ ಗೃಹದಲ್ಲಿ ರಾಜ್ಯಪಾಲರು ವಾಸ್ತವ್ಯ ಹೂಡಿದ್ದ ವೇಳೆ, ವಿವಿಯ ಹೊರಗಡೆ ಕಪ್ಪು ಬಟ್ಟೆಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು, ಅವರು(ಎಸ್‌ಎಫ್‌ಐ ಕಾರ್ಯಕರ್ತರು) ಸಿಎಂ ಕಡೆಯ ಕ್ರಿಮಿನಲ್‌ಗಳು, ಗೂಂಡಾಗಳು ಎಂದಿದ್ದರು. ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಪಿಣರಾಯಿ

ವಿಜಯನ್, ರಾಜ್ಯಪಾಲರು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನು ಓದಿ: ಸಂಸತ್ತಿನ ಸಂಸದರ ಅಮಾನತು: ವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ

Exit mobile version