Visit Channel

ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರಲಿಲ್ಲ: ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್

vijaya-karnataka

ಬೆಂಗಳೂರು, ಜ. 20: ಕಾಂಗ್ರೆಸ್ ನಡೆಸುತ್ತಿರುವ ರಾಜಭವನ್ ಚಲೋ ಹೋರಾಟವನ್ನು ಟೀಕಿಸಿರುವ ಬಿಜೆಪಿ, “ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ?” ಎಂದು ಪ್ರಶ್ನಿಸಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆ‌ಸ್‌ 2013-14 – 104, 2014-15 – 128, 2015-16 – 1483, 2016-17 – 1185, 2018-19 – 900. 3800ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ!” ಎಂದು ವ್ಯಂಗ್ಯವಾಡಿದೆ.

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್ ಪಕ್ಷವು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ.

ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ?” ಎಂದು ಪ್ರಶ್ನಿಸಿದೆ.
“2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ ಕಾಂಗ್ರೆಸ್ ಘೋಷಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದಿದೆ.

“ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ಕೇಳಿದೆ.

“ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತು.ರೈತರು ನೇರವಾಗಿ ಮಾರಾಟ ಮಾಡಿದರೆ ಹೆಚ್ಚು‌ ಲಾಭಗಳಿಸುತ್ತಾರೆ ಎಂಬುದು ಲೋಕ ಸತ್ಯ. ಆದರೆ ನೀವು ಮಾತ್ರ ಇದನ್ನು ವಿರೋಧಿಸುತ್ತಿದ್ದೀರಿ. ಕಾಂಗ್ರೆಸ್ ನೀವೇಕೆ ದಲ್ಲಾಳಿಗಳ ಪರ ವಕಾಲತ್ತು ವಹಿಸುತ್ತೀರಿ?” ಎಂದು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗಾಗಿ ಶ್ರಮಿಸಿದಷ್ಟು ಯಾವ ಸರ್ಕಾರವೂ ಶ್ರಮಿಸಿಲ್ಲ. ಅನ್ನದಾತರಿಗೆ ಯೂರಿಯಾ ಸುಲಭವಾಗಿ ಲಭ್ಯವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆಯ ಏರಿಕೆ. ಖರೀದಿ ವ್ಯವಸ್ಥೆ ಬಲಪಡಿಸಲಾಗಿದೆ. ಕಾಂಗ್ರೆಸ್‌ ಊಹಿಸದ ರೀತಿಯಲ್ಲಿ ಮೋದಿ ಸರ್ಕಾರ ರೈತರಿಗೆ ಸ್ಪಂದಿಸುತ್ತಿದೆ” ಎಂದು ತಿಳಿಸಿದೆ.

ಧಾರವಾಡದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಯಮನಂತೆ ಎರಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್‌ ಕುಮ್ಮಕ್ಕು ನೀಡಿತ್ತು. ಅದೇ ರೈತ ವಿರೋಧಿ ಕಾಂಗ್ರೆಸ್ ಇಂದು ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ರಾಜಭವನ ಚಲೋ ಎಂಬುದು ಕಾಂಗ್ರೆಸ್‌ ಅಸ್ತಿತ್ವದ ಹೋರಾಟವೇ ಹೊರತು ರೈತಪರ ಹೋರಾಟವಲ್ಲ ಎಂದಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.