Bengaluru: ಮುಖ್ಯಮಂತ್ರಿ ಸಿದ್ದರಾಮಯ್ಯ (new industrial policy implemented) ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿಯನ್ನು (Industrial Policy) ಪರಿಚಯಿಸುವ ಇಂಗಿತವನ್ನು
ಘೋಷಿಸಿದ್ದಾರೆ. ಕರ್ನಾಟಕದಲ್ಲಿ(Karnataka) ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವ ಅಂತಿಮ ಗುರಿಯೊಂದಿಗೆ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅನುಕೂಲಕರವಾದ ವ್ಯಾಪಾರ ವಾತಾವರಣವನ್ನು
ಬೆಳೆಸುವುದು ಈ ನೀತಿಯ (new industrial policy implemented) ಗುರಿಯಾಗಿದೆ.

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರ ಪ್ರಗತಿಪರ ಹೊಸ ಕೈಗಾರಿಕಾ ನೀತಿ ಜಾರಿ ತರುವುದಾಗಿ ವಾಣಿಜ್ಯ, ಕೈಗಾರಿಕಾ ಇಲಾಖೆ ಹಾಗೂ ವಿಶ್ವೇಶ್ವರಯ್ಯ ವ್ಯಾಪಾರ
ಉತ್ತೇಜನ ಕೇಂದ್ರ ಹಮ್ಮಿಕೊಂಡಿದ್ದ ‘ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಗಳ ಪ್ರದಾನ’ ಸಮಾರಂಭದಲ್ಲಿ ಮಾತನಾಡಿ, ಹೇಳಿದರು. ಕಾಂಗ್ರೆಸ್ (Congress) ಆಡಳಿತದಲ್ಲಿದ್ದಾಗ ಈ ಹಿಂದೆ ಜಾರಿಗೊಳಿಸಿದ್ದ
ಕೈಗಾರಿಕಾ ನೀತಿ ಉದ್ಯಮಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಪ್ರಗತಿಪರ ಕೈಗಾರಿಕಾ ನೀತಿ ಎಂದೇ ಇದು ಜನಪ್ರಿಯವಾಗಿತ್ತು. ನಮ್ಮ ಸರಕಾರ ಅದೇ ರೀತಿ ಈಗಲೂ ಹೊಸ ನೀತಿ ಜಾರಿ ತರಲಿದೆ.
ರಫ್ತುದಾರರು ಸೇರಿ ಉದ್ಯಮಿಗಳ ಜತೆ ಚರ್ಚಿಸಿ ಹೊಸ ನೀತಿ ಬಿಡುಗಡೆ ಮಾಡಲಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಇದನ್ನೂ ಓದಿ : ಶಾಲಾ- ಕಾಲೇಜು ವಾಹನಗಳ ಟ್ಯಾಕ್ಸ್ ಏರಿಕೆ: ಕ್ಯಾಬ್‌ಗಳಿಗೆ ಜೀವಿತಾವಧಿ ಮೋಟಾರು ವಾಹನ ತೆರಿಗೆ
ಹೂಡಿಕೆಗಳು(Investment) ಬಂದಲ್ಲಿ ಕೈಗಾರಿಕೆ ಗಳು ಬರುತ್ತವೆ ಆ ನಿಟ್ಟಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯಾ ಗುತ್ತದೆ. 3 ಉತ್ತಮ ಕಾನೂನು ಸುವ್ಯವಸ್ಥೆಯನ್ನು ಕರ್ನಾಟಕದಲ್ಲಿ ಕಲ್ಪಿಸಲಾಗುವುದು.
ಸರಕಾರವು ಮಾರುಕಟ್ಟೆಯಲ್ಲಿ ಬೇಡಿಕೆಯ ಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉದ್ಯೋಗಿಗಳ ಸಜ್ಜು ಕ್ರಮ
ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆಯು ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ(GDP) ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು
ರಾಜ್ಯದಿಂದ ಕೇಂದ್ರಕ್ಕೆ ಕೊಡಲು ಸಾಧ್ಯ ವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಸ್ಥಿರವಾದ ಕಾನೂನು ಸುವ್ಯವಸ್ಥೆ ಹೂಡಿಕೆಗಳನ್ನು ಆಕರ್ಷಿಸಲು ಅನುಕೂಲಕರ ವಾತಾವರಣವನ್ನು ಬೆಳೆಸುತ್ತದೆ.
ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್(M.B Patil), ಶಾಸಕ ರಿಜ್ವಾನ್ ಅರ್ಷದ್,
ಶಾಮನೂರು ಶಿವಶಂಕರಪ್ಪ, ಕೆ.ಗೋವಿಂದರಾಜ್ ಮತ್ತಿತರರು ಇದ್ದರು.
ಇದನ್ನೂ ಓದಿ : ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ನಲ್ಲಿ 26 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಸರ್ಕಾರವು ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಯುವನಿಧಿ(Yuva Nidhi) ಯೋಜನೆಯಲ್ಲಿ ಮೂರು ಸಾವಿರ ರು. ನಿರುದ್ಯೋಗ ಭತ್ಯೆಯನ್ನು 2022-23ರಲ್ಲಿ ಪದವೀಧರರಾಗಿ
ನಿರುದ್ಯೋಗಿಗಳಾಗಿರುವವರಿಗೆ ನೀಡಲಾಗುವುದು. ಡಿಸೆಂಬರ್‌ನಲ್ಲಿ(December) ಈ ಯೋಜನೆ ಆರಂಭವಾಗಲಿದೆ. ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ
ಕೌಶಲ್ಯ ಇಲಾಖೆಯಿಂದ (Skill Department) ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಶ್ಮಿತಾ ಅನೀಶ್