Bengaluru : ಕೇಂದ್ರ ಸರ್ಕಾರದ ಮಹತ್ವ ಯೋಜನೆ ಆಯುಷ್ಮಾನ್ ಭಾರತ್ (Ayushman Bharat) ಯೋಜನೆಗೆ (New name for Ayushman card) ಹೊಸ ನಾಮಕರಣ ಮಾಡಲಾಗಿದ್ದು,
ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ಹೆಲ್ತ್ ಕಾರ್ಡ್ ಗಳನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಿಡುಗಡೆಗೊಳಿಸಿದ್ದಾರೆ.
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನ,(Health Card) ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ
ಕರ್ನಾಟಕ” ಎಂದು ಮರುನಾಮಕರಣ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು, ಆಯುಷ್ಮಾನ್ ಭಾರತ್–
ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳಿಗೆ ಹೊಸ ರೂಪ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್
ಕಾರ್ಡ್ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪಲಿವೆ. ರಾಜ್ಯದ 5.09 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ವಿತರಿಸುವ ಗುರಿಯನ್ನ ನಾವು ಹೊಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನೂತನ ಕಾರ್ಡ್ಗಳನ್ನ
ಇಂದು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ₹.1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಯೋಜನೆಗೆ
ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಶೇ.66ರಷ್ಟು ಅನುದಾನವನ್ನ ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ
ಚಿಕಿತ್ಸೆ ಪಡೆಯಲು ಅವಕಾಶ (New name for Ayushman card) ಕಲ್ಪಿಸಿದ್ದೇವೆ ಎಂದಿದ್ದಾರೆ.
ಈ ಯೋಜನೆಯ ಪ್ರಯೋಜನಗಳು :
• ರಾಜ್ಯದ ಎಲ್ಲ BPL ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಈ ಹೆಲ್ತ್ ಕಾರ್ಡ್ನ ಅಡಿಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು.
• ಈ ಯೋಜನೆಗೆ ರಾಜ್ಯ ಸರ್ಕಾರವು ಶೇ 66 ರಷ್ಟು ಮತ್ತು ಕೇಂದ್ರ ಸರ್ಕಾರವು ಶೇ.34% ಅನುದಾನ ನೀಡುತ್ತಿದೆ.
• ಈ ಯೋಜನೆಯಡಿಯಲ್ಲಿ BPL ಕಾರ್ಡ್ ಹೊಂದಿರುವ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಆದ್ಯತೆ ಆಧಾರದ ಮೇಲೆ ಬಳಸಿಕೊಳ್ಳಬಹುದು.
• APL ಕಾರ್ಡ್ (Card) ಹೊಂದಿರುವವರಿಗೂ ಈ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. APL ಕಾರ್ಡು ದಾರರು ಶೇ.70 ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಶೇ 30 ರಷ್ಟು
ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಲಿದೆ.
• ರಾಜ್ಯದಲ್ಲಿ 3450ಕ್ಕೂ ಅಧಿಕ ಆಸ್ಪತ್ರೆಗಳು ಈ ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ.
• ಸುಮಾರು 1650 ಚಿಕಿತ್ಸಾ ಪ್ಯಾಕೇಜ್ಗಳನ್ನು (Packages) ಪಡೆದುಕೊಳ್ಳಬಹುದು. 171 ಅತ್ಯಂತ ತುರ್ತು ಚಿಕಿತ್ಸೆಯ ಪ್ಯಾಕೇಜ್ಗಳನ್ನು ಈ ಯೋಜನೆ ಒಳಗೊಂಡಿದೆ.
• ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.
ಕಾರ್ಡ್ ಪಡೆಯುವುದು ಹೇಗೆ..?
ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳನ್ನು ನೀಡಿ, “ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ
ಕರ್ನಾಟಕ” ಗುರುತಿನ ಚೀಟಿಗಳನ್ನು ಪಡೆಯಬಹುದಾಗಿರುತ್ತದೆ.
ಇದನ್ನು ಓದಿ: ಭಾರತೀಯ ನೌಕಾಪಡೆಯಲ್ಲಿ 10th, ITI, ಡಿಪ್ಲೊಮ, ಪದವಿ ಪಾಸಾದವರು ಉದ್ಯೋಗಾವಕಾಶ