- ಈ ಬಾರಿ 6 ವರ್ಷ ಕಡ್ಡಾಯವಾಗಿರಬೇಕು ಅನ್ನುವ ನಿಯಮ ಇಲ್ಲ
- LKG ಪ್ರವೇಶ ಪಡೆಯುವ ಮಕ್ಕಳಿಗೆ ವಯೋಮಿತಿ ನಿಗದಿ ಪ್ರಕಟ (New Rules for 1st standard Admission)
- ಕೊನೆಗೂ ಶಾಲಾ ವಯೋಮಿತಿ ಸಡಿಲಗೊಳಿಸಿದ ಶಿಕ್ಷಣ ಇಲಾಖೆ
Bengaluru: ಕಳೆದ ಕೆಲ ದಿನಗಳಿಂದ ಪೋಷಕರಿಗೆ ತಲೆನೋವಾಗಿ ಪರಿಣಮಿಸಿದ್ದ ಒಂದನೇ ತರಗತಿಯ ಅಡ್ಮಿಷನ್ ವಿಷಯಕ್ಕೆ ರಾಜ್ಯ ಸರ್ಕಾರ (State Govt) ಇದೀಗ ಫುಲ್ ಸ್ಟಾಪ್ ಇಟ್ಟಿದೆ.ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದರು.
ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ (UKG) ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನು ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು (5 years and 5 months) . ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ (Academic year) ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ (Stress increases in children) ಎಂದಿದ್ದಾರೆ.ವಯೋಮಿತಿ ವಿಚಾರದಲ್ಲಿ ಪೋಷಕರು ಗೊಂದಲದಲ್ಲಿದ್ದಾರೆ.
ದೇಶದಲ್ಲಿ ಎಲ್ಲ ಕಡೆಗಳಲ್ಲಿ ಒಂದನೇ ತರಗತಿ (First Class) ಸೇರ್ಪಡೆಗೆ ಆರು ವರ್ಷ ವಯೋಮಿತಿ ಇದೆ. ಎರಡು ತಿಂಗಳು ಮಾತ್ರ ಸಡಿಲಿಕೆ ಮಾಡಬಹುದಷ್ಟೆ. ನಮ್ಮದು SEP ಇರುವುದರಿಂದ, ಅವರ ಬಳಿ ಕೇಳಿದಾಗ, ಮಕ್ಕಳು ಕಡಿಮೆ ವಯಸ್ಸಿನಲ್ಲೇ ಸೇರಿಕೊಳ್ಳುತ್ತಿದ್ದಾರೆ ಎಂದಿದ್ದರು ಎಂದು ಸಚಿವರು ತಿಳಿಸಿದ್ದಾರೆ.
ಇನ್ನು ಒಂದನೇ ತರಗತಿಯ ಪ್ರವೇಶ (Class entry) ಪಡೆಯಲು ಮಕ್ಕಳಿಗೆ 6 ವರ್ಷ ಆಗಿರಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ಮೊದಲಿಗೆ 2022ರ ಜುಲೈನಲ್ಲಿ ಆದೇಶ ಹೊರಡಿಸಿತ್ತು. ಅದರಂತೆ 2023 – 24 ನೇ ಸಾಲಿನಲ್ಲಿ ಹೊಸ ನಿಯಮ ಜಾರಿಗೆ ಬರಬೇಕಿತ್ತು.
ಆದರೆ ಪೋಷಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾದ ಕಾರಣ, ಹೊಸ ನಿಯಮದ ಜಾರಿಯನ್ನು ಸರ್ಕಾರ ಮುಂದೂಡಿತ್ತು. ನಂತರ ನಿಯಮದಲ್ಲಿ ಸಣ್ಣಪುಟ್ಟ ಬದಲಾವಣೆ (Small change) ಮಾಡಿ, 2025-26ನೇ ಸಾಲಿನಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿತ್ತು. ಅದರಂತೆ ಈ ಶೈಕ್ಷಣಿಕ ವರ್ಷದಿಂದ (Academic year) 6 ವರ್ಷ ಕಡ್ಡಾಯವಾಗಿದೆ. ಆದರೆ, ಪೋಷಕರಿಂದ ಇದಕ್ಕೆ ವ್ಯಾಪಕ (New Rules for 1st standard Admission) ಆಕ್ರೋಶ ವ್ಯಕ್ತವಾದ ಕಾರಣ ಇದೀಗ ಸರ್ಕಾರ ಪಟ್ಟು ಸಡಿಲಿಸಿದೆ.