- ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಆ್ಯಪ್ಗಳನ್ನು ನಿಯಂತ್ರಿಸಲು ಹೊಸ ಮಾನದಂಡ (New standard for online betting)
- ಹಲವು ಗೇಮಿಂಗ್ ಆ್ಯಪ್ಗಳಿಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ
- ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಎಚ್ಚರಿಕೆ
Bengaluru: ಆನ್ಲೈನ್ ಗೇಮಿಂಗ್ ಮಾರುಕಟ್ಟೆ ಭಾರತದಲ್ಲಿ ಭಾರಿ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ದೇಶದಲ್ಲಿ ಡಿಜಿಟಲ್ ಕ್ರಾಂತಿ (Digital revolution) ಸಂಭವಿಸಿದ ನಂತರ ಗೇಮಿಂಗ್ ಆ್ಯಪ್ಗಳು ಮತ್ತು ವೆಬ್ಸೈಟ್ಗಳು ಅತ್ಯಂತ ತ್ವರಿತವಾಗಿ ಬೆಳವಣಿಗೆ ಕಂಡವು. ದೇಶದಲ್ಲಿ ಯುವಜನರೇ ಬಹುಸಂಖ್ಯಾತರಾಗಿದ್ದು, ಈ ಪೈಕಿ ಹೆಚ್ಚಿನವರ ಬಳಿ ಸ್ಮಾರ್ಟ್ ಫೋನ್ಗಳಿವೆ.
ಆನ್ಲೈನ್ ಗೇಮಿಂಗ್ ಉದ್ಯಮ ಬಹುಬೇಗ ಬೆಳೆಯಲು ಇದು ಪ್ರಮುಖ ಕಾರಣ.ಡಿಜಿಟಲ್ ಪೇಮೆಂಟ್ (Digital Payment) ಆ್ಯಪ್ಗಳು ಬಳಕೆಗೆ ಬಂದ ನಂತರ ಇದು ಮತ್ತಷ್ಟು ಹೆಚ್ಚಾಯಿತು. ಅನೇಕ ದೇಶೀಯ ಮತ್ತು ವಿದೇಶಿ ಮೂಲದ ಕಂಪನಿಗಳು ಗೇಮಿಂಗ್ ಆ್ಯಪ್ಗಳನ್ನು ಅಭಿವೃದ್ಧಿಪಡಿಸಿ, ವಾರ್ಷಿಕವಾಗಿ ಸಾವಿರಾರು ಕೋಟಿ ರೂಪಾಯಿಗಳ ವ್ಯವಹಾರ ಮಾಡುತ್ತಿವೆ.
ಸೆಲೆಬ್ರೆಟಿಗಳು, ಕ್ರೀಡಾಪಟುಗಳು, ನಟ ನಟಿಯರು ಇದರ ಜಾಹೀರಾತು ಪ್ರಚಾರಕರಾಗಿದ್ದಾರೆ. ಆನ್ಲೈನ್ ಗೇಮಿಂಗ್ ಮೂಲಕ ಮನೆಯಲ್ಲಿಯೇ ಕುಳಿತು ಸುಲಭವಾಗಿ ಮತ್ತು ಶೀಘ್ರವಾಗಿ ಹಣ ಮಾಡಬಹುದೆಂದು ಪ್ರಚಾರ ಮಾಡಲಾಗುತ್ತಿದೆ. ಹಲವು ರೀತಿಯ ಬೆಟ್ಟಿಂಗ್ ಆ್ಯಪ್ಗಳು (Betting apps) ಚಾಲ್ತಿಯಲ್ಲಿದ್ದು, ಒಂದೊಂದರಲ್ಲೂ ಹಲವು ರೀತಿಯ ಆಟಗಳಿವೆ ಅದು ಜನರ ಹಾದಿ ತಪ್ಪಿಸುತ್ತಿದೆ.

ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಆ್ಯಪ್ಗಳನ್ನು ನಿಯಂತ್ರಿಸಲು ಹೊಸ ಮಾನದಂಡಗಳನ್ನು ಜಾರಿಗೆ ತರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿಯೂ ಇದು ಹರಡುತ್ತಿರುವುದರಿಂದ ಜನರನ್ನು ರಕ್ಷಿಸಲು ಹೊಸ ಕಾನೂನುಗಳನ್ನು ರೂಪಿಸುವ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್
ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿದೆ. ಹೀಗಾಗಿ ಈ ಆ್ಯಪ್ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ ತರಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಈ ಕುರಿತಾಗಿ ಮಾತನಾಡಿದ ಅವರು, ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ಗೆ ಕಡಿವಾಣ ಹಾಕಲು ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆದಿದೆ.
ಇವುಗಳಿಂದ ದುರಾಸೆಗೆ ಬೀಳದಂತೆ ನಮ್ಮ ಜನರನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆ ನಡೆಸಿದ್ದೇವೆ ಈಗಾಗಲೇ ಕಾಯ್ದೆಗಳು ಇವೆ. ಆದರೆ ಕಾಯ್ದೆಗಳನ್ನ ಸಮರ್ಪಕವಾಗಿ ಜಾರಿ ಮಾಡಬೇಕು ಮತ್ತು ಹೆಚ್ಚುವರಿ ಕಾಯ್ದೆಗಳನ್ನ ಸೇರಿಸುವ ಬಗ್ಗೆ ಚರ್ಚೆ ನಡೆದಿದೆ.
ಇದನ್ನೂ ಓದಿ:IPL ಬೆಟ್ಟಿಂಗ್ ಪ್ರಮೋಷನ್ಸ್:ಇನ್ಫ್ಲುಯೆನ್ಸರ್ಸ್ಗಳಿಗೆ ವಾರ್ನಿಂಗ್ ಕೊಟ್ಟ ಸೈಬರ್ ಪೊಲೀಸರು!
ಗೇಮಿಂಗ್ ಇಂಡಸ್ಟ್ರಿ ಮತ್ತು ಸಾರ್ವಜನಿಕರು, ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯಿಂದ ಸಲಹೆ ಪಡೆದು ಒಂದು ಡ್ರಾಫ್ಟ್ ರೆಡಿ ಮಾಡಲು ಗೃಹ ಸಚಿವರು ಆದೇಶ ಕೊಡಲಾಗಿದೆ.ಇನ್ನು ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಆ್ಯಪ್ಗಳಿಗೆ ಶೀಘ್ರದಲ್ಲೇ ಕೆಲ ಮಾನದಂಡಗಳನ್ನು ತರಲಾಗುತ್ತದೆ.
ಗೇಮಿಂಗ್ ಆ್ಯಪ್ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರಕ್ಕೆ ಕಷ್ಟದ ಕೆಲಸ. ಕೇವಲ ನಮ್ಮ ದೇಶ ಅಷ್ಟೇ ಅಲ್ಲ, (New standard for online betting) ಬೇರೆ ದೇಶದ ಗೇಮಿಂಗ್ ಆ್ಯಪ್ಗಳು ಇವೆ. ಕಾನೂನು ಬಾಹಿರವಾಗಿರುವುದನ್ನು ಮೊದಲು ನಿಷೇಧ ಮಾಡಬೇಕು. ಲೀಗಲ್ ಆಗಿ ಇದ್ದರೆ ನಿಯಂತ್ರಣ ಹೇಗೆ ಮಾಡಬೇಕೆಂದು ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ.