• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದಲ್ಲಿ ಹೊಸ ವರ್ಷಾಚರಣೆ: ಸಾರ್ವಜನಿಕರ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Teju Srinivas by Teju Srinivas
in ರಾಜ್ಯ, ವಿಜಯ ಟೈಮ್ಸ್‌
ರಾಜ್ಯದಲ್ಲಿ ಹೊಸ ವರ್ಷಾಚರಣೆ: ಸಾರ್ವಜನಿಕರ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
0
SHARES
11
VIEWS
Share on FacebookShare on Twitter
  • ಪಬ್, ಕ್ಲಬ್‌ಗಳಿಗೆ ಕಠಿಣ ನಿಯಮಗಳು; ರಾತ್ರಿ 1 ಗಂಟೆಯವರೆಗೆ (new year guidelines for safety) ಮಾತ್ರ ಸಾರ್ವಜನಿಕ ಆಚರಣೆಗೆ ಅನುಮತಿ
  • ನ್ಯೂ ಇಯರ್ ಸೆಲೆಬ್ರೇಷನ್‌ಗೆ ಅಲರ್ಟ್: ಕರ್ನಾಟಕ ಸರ್ಕಾರದಿಂದ ಸುರಕ್ಷತಾ ಮಾರ್ಗಸೂಚಿ ಜಾರಿ
  • ಅತಿವೇಗ, ಪಟಾಕಿ, ಅಕ್ರಮ ಪಾರ್ಟಿಗಳಿಗೆ ನಿಷೇಧ; ಡಿಸೆಂಬರ್ 31ರ ರಾತ್ರಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

Bengaluru: ರಾಜ್ಯದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮದ ನಡುವೆ ಯಾವುದೇ (new year guidelines for safety) ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಕರ್ನಾಟಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮಹತ್ವದ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಡಿಸೆಂಬರ್ 31ರ ರಾತ್ರಿ ಹಾಗೂ ಜನವರಿ 1ರ ಮುಂಜಾನೆ ಹೆಚ್ಚಿನ ಜನಸಂಚಾರ, ಪಾರ್ಟಿ (Party) ಸಂಭ್ರಮ ಮತ್ತು ಸಾರ್ವಜನಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಸರ್ಕಾರ ಮನವಿ ಮಾಡಿದೆ.

ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸುವುದು ಮುಖ್ಯವಾದರೂ, ಅದಕ್ಕಿಂತಲೂ ಮುಖ್ಯವಾಗಿ ಸಾರ್ವಜನಿಕ ಸುರಕ್ಷತೆ, ಶಿಸ್ತು ಮತ್ತು ಕಾನೂನು ಪಾಲನೆ ಅಗತ್ಯವಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

new year guidelines for safety

ಹೊಸ ವರ್ಷಾಚರಣೆಯ ವೇಳೆ ಸಾರ್ವಜನಿಕರು ಪರಸ್ಪರ (new year guidelines for safety) ತೊಂದರೆ ಉಂಟಾಗದಂತೆ ನಡೆದುಕೊಳ್ಳಬೇಕು.

ಯಾವುದೇ ಕಾರಣಕ್ಕೂ ಪಟಾಕಿ ಸಿಡಿಸುವಂತಿಲ್ಲ ಎಂದು ಸೂಚಿಸಲಾಗಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುವುದು ಅಪಾಯಕಾರಿಯಾಗಿದ್ದು, ಇಂತಹ ಪ್ರಕರಣಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ನಿರ್ಬಂಧಿತ ಪ್ರದೇಶಗಳಿಗೆ ಅನಧಿಕೃತವಾಗಿ ಪ್ರವೇಶಿಸುವುದು, ಮೋಜಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳಿಗೂ ಕರೆ ಮಾಡುವುದು ಕಾನೂನುಬಾಹಿರ ಎಂದು ತಿಳಿಸಲಾಗಿದೆ.

ಅನಾವಶ್ಯಕವಾಗಿ ಗುಂಪುಗೂಡುವುದು, ರಸ್ತೆಯಲ್ಲಿ ಸಂಭ್ರಮಾಚರಣೆ ನಡೆಸುವುದು ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಕಾರಣ ಇದರಿಂದ ದೂರವಿರಲು ಸೂಚಿಸಲಾಗಿದೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ವಿಶೇಷವಾಗಿ ಬೆಂಗಳೂರು ನಗರದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆ ತೀವ್ರಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳು ಹಾಗೂ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ.

ಅಲ್ಲದೆ, ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮರಾಗಳ (CCTV Camera) ಅಳವಡಿಕೆ ಕಾರ್ಯವೂ ಪ್ರಗತಿಯಲ್ಲಿದೆ.

ಡಿಸೆಂಬರ್ 31ರ ರಾತ್ರಿ 1 ಗಂಟೆಯವರೆಗೆ ಮಾತ್ರ ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ

ಇದೇ ಸಂದರ್ಭದಲ್ಲಿ ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್ (Restaurant) ಮಾಲೀಕರಿಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿ ಮಾಡಿದೆ.

ಪಬ್ ಮತ್ತು ಕ್ಲಬ್‌ಗಳ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.

ಯಾವುದೇ ರೀತಿಯ ಕಾನೂನುಬಾಹಿರ ಪಾರ್ಟಿಗಳಿಗೆ ಅವಕಾಶ ನೀಡಬಾರದು. ಪ್ರಚೋದನಕಾರಿ ಅಥವಾ ಅಶ್ಲೀಲ ಹಾಡುಗಳನ್ನು ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯವಸ್ಥಾಪಕರು ಪೂರ್ಣ ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಲಾಗಿದೆ.

ಸಾರ್ವಜನಿಕ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಅಗ್ನಿ ನಿರೋಧಕ ಉಪಕರಣಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.

ಅಗ್ನಿ ಅವಘಡಗಳು ಹಾಗೂ ಕಾಲ್ತುಳಿತ ಸಂಭವಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸ್ಥಳಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವುದು ಕಡ್ಡಾಯವಾಗಿದೆ.

ಪ್ರವೇಶ ದ್ವಾರ, ನಿರ್ಗಮನ ದ್ವಾರ, ವಾಹನ ನಿಲುಗಡೆ ಪ್ರದೇಶ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

ಅಲ್ಲದೆ, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಅದರ ದೃಶ್ಯಾವಳಿಗಳನ್ನು ಕನಿಷ್ಠ 30 ದಿನಗಳವರೆಗೆ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

ಸರ್ಕಾರದ ಈ ಮಾರ್ಗಸೂಚಿಗಳ ಪಾಲನೆಯಿಂದಲೇ ಹೊಸ ವರ್ಷವನ್ನು ಸುರಕ್ಷಿತವಾಗಿ ಹಾಗೂ ಶಾಂತಿಯುತವಾಗಿ ಸ್ವಾಗತಿಸಬಹುದಾಗಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಇದನ್ನು ಓದಿ : https://vijayatimes.com/increase-in-pm-kisan-yojana/
Tags: celebrationclubnewyearpubState Government

Related News

ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ
ಪ್ರಮುಖ ಸುದ್ದಿ

ನಂದಿನಿ ಸೇರಿದಂತೆ ಹಲವು ಬ್ರ್ಯಾಂಡ್‌ಗಳ ಹೆಸರಿನಲ್ಲಿ ಕಲೆಬೆರಕೆ ಹಾಲು ಮಾರಾಟ: 8 ಆರೋಪಿಗಳ ಬಂಧನ

January 21, 2026
ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026
ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು
ಪ್ರಮುಖ ಸುದ್ದಿ

ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು

January 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.