ದೇಶದಲ್ಲಿ ಒಂದೇ ದಿನ 1 ಕೋಟಿ ಲಸಿಕೆ ವಿತರಣೆ

ನವದೆಹಲಿ ಸೆ 01 :  ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆಯು ವೇಗವಾಗಿ ನಡೆಯುತ್ತಿದ್ದು, ಮಂಗಳವಾರ ಒಂದೇ ದಿನ ದೇಶದಲ್ಲಿ 1 ಕೋಟಿಗೂ ಅಧಿಕ ಮಂದಿಗೆ ಲಸಿಕೆಯನ್ನು ನೀಡಲಾಗಿದೆ.   ಮಂಗಳವಾರ ಒಂದೇ ದಿನ ಸುಮಾರು 1.1 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ಎರಡನೇ ಬಾರಿಗೆ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

ಕೆಂದ್ರ ಸರ್ಕಾರವು ಈವರೆಗೆ ಎಲ್ಲಾ ರಾಜ್ಯಗಳಿಗೆ ಸುಮಾರು 64.36 ಕೋಟಿ ಡೋಸ್ ಲಸಿಕೆಯನ್ನು ಉಚಿತವಾಗಿ ಪೂರೈಸಲಾಗಿದೆ.ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನುಮುಂದೆ ಪ್ರತಿ ಬುಧವಾರ ಲಸಿಕೆ ಉತ್ಸವ

ರಾಜ್ಯದಲ್ಲಿ ಇನ್ನು ಮುಂದೆ ಪ್ರತಿ ಬುಧವಾರ 10 ಲಕ್ಷ ಕೊರೊನಾ ಲಸಿಕೆಗಳನ್ನು ನೀಡಲಾಗುವುದು ಇದನ್ನು ಲಸಿಕೆ ಉತ್ಸವ ಹೆಸರಿನಲ್ಲಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ವಾರದ 6 ದಿನ ಕೂಡ 5 ಲಕ್ಷ ಲಸಿಕೆಯನ್ನು ನೀಡುವ ಯೋಜನೆಯನ್ನು ಹೊಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Exit mobile version