ಜೆಎನ್‌ಯು ಜಟಾಪಟಿ ; ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು!

abvp

ನವದೆಹಲಿಯ(Newdelhi) ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ(JNU) ಭಾನುವಾರ ಸಂಜೆ ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ಘರ್ಷಣೆ(Conflict) ಸಂಭವಿಸಿದೆ. ಘಟನೆಯಲ್ಲಿ ಆರು ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದು, ಶೀಘ್ರವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಮಾಹಿತಿಯ ಪ್ರಕಾರ ಗಾಯಗೊಂಡ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ ಎಂದಿ ವರದಿಯಲ್ಲಿ ತಿಳಿಸಲಾಗಿದೆ.

ಹಿಂದೂಗಳ ಹಬ್ಬವಾದ ರಾಮನವಮಿಯಂದು(Ramanavami)ಹಾಸ್ಟೆಲ್ ಮೆಸ್‌ನಲ್ಲಿ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಎಡ ಸಂಘಟನೆಗಳು ಮತ್ತು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಘಟಕ ಎಬಿವಿಪಿ ಸದಸ್ಯರ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಇದೀಗ, ಕೆಲವು ವಿದ್ಯಾರ್ಥಿಗಳ ದೂರಿನ ಮೇರೆಗೆ ಪೊಲೀಸರು ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಘಟನೆಯ ಕುರಿತು ಜೆಎನ್‌ಯು ಆಡಳಿತವು ತನಿಖೆಯನ್ನು ಪ್ರಾರಂಭಿಸಿದೆ. ಎಡ ಗುಂಪುಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳು ಇಂದು ಏಪ್ರಿಲ್ 11 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು ಅಪರಿಚಿತ ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 341, 509, 506 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟ ಮತ್ತು ಕೆಲವು ಎಡಪಕ್ಷಗಳ ಸದಸ್ಯರು ದೂರನ್ನು ದಾಖಲಿಸಿದ್ದಾರೆ. ಎಬಿವಿಪಿ ವಿದ್ಯಾರ್ಥಿಗಳು ಕೂಡ ಸದ್ಯದಲ್ಲೇ ದೂರು ದಾಖಲಿಸಲಿದ್ದಾರೆ ಎಂದು ಪೊಲೀಸರು ನೋಟಿಸ್ ಸ್ವೀಕರಿಸಿದ್ದಾರೆ.

ಅದರಂತೆ ಪೊಲೀಸರು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಜೆಎನ್‌ಯು ಆಡಳಿತವು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ವಾರ್ಡನ್ ಹಾಗೂ ಭದ್ರತಾ ಸಿಬ್ಬಂದಿಯಿಂದ ವರದಿ ಪಡೆಯಲಾಗಿದೆ. ವಿಶ್ವವಿದ್ಯಾನಿಲಯದ ನಿಯಮಗಳ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Exit mobile version