ಬೆಂಗಳೂರು, ನ. 18: ಕರ್ನಾಟಕದಲ್ಲಿ ಭುಗಿಲೆದ್ದಿರುವ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಯ ಕಿಚ್ಚು ಹೊತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇದಕ್ಕೆ ತುಪ್ಪ ಸುರಿದಿದ್ದಾರೆ.
ಕರ್ನಾಟಕದ ಹಲವು ಭಾಗಗಳನ್ನು ಸೇರಿಸಿ ಅಖಂಡ ಮಹಾರಾಷ್ಟ್ರ ರಚನೆಯಾಗಬೇಕು. ಅದಕ್ಕೆ ಮರಾಠಿಗರೇ ಹೆಚ್ಚಿರುವ ಕರ್ನಾಟಕದ ಕಾರವಾರ, ನಿಪ್ಪಾಣಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಅಂತ ಹೇಳಿಕೆ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಜಿತ್ ಪವಾರ್ ಗೊಂದಲ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಮಹಾಜನ ವರದಿಯೇ ಅಂತಿಮ. ಬೆಳಗಾವಿ ಎಂದೆಂದಿಗೂ ನಮ್ಮದು. ನಾವು ಮಾಡುತ್ತಿರುವುದು ಮಾರಾಠರ ಅಭಿವೃದ್ಧಿಗಾಗಿ ಮಾಡುತ್ತಿರುವ ಪ್ರಾಧಿಕಾರ. ಮರಾಠಿಗರೂ ಹಿಂದುತ್ವವಾದಿಗಳು, ಬೆಳಗಾವಿ ವಿಶ್ವ ಕನ್ನಡ ಸಮ್ಮೇಳನಕ್ಕೂ ಬಂದಿದ್ದರು ಅಂತ ಹೇಳಿದರು.