ಪುಣೆಯಲ್ಲಿ ನಾಳೆಯಿಂದ ನೈಟ್ ಕಫ್ಯೂ ಜಾರಿ

ಮುಂಬೈ, ಎ. 02: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಪುಣೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಬಗ್ಗೆ ಇಂದು ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ. ನೂತನ ಆದೇಶದಂತೆ ಪುಣೆ ಜಿಲ್ಲೆಯಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.

ಪುಣೆ ಡಿವಿಷನಲ್ ಕಮಿಷನರ್ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ, ಬಾರ್, ಹೊಟೇಲ್, ರೆಸ್ಟೋರೆಂಟ್​ಗಳು ಏಳು ದಿನಗಳ ಕಾಲ ಕಾರ್ಯನಿರ್ವಹಿಸುವಂತಿಲ್ಲ. ಹೊಟೇಲ್ ಹಾಗೂ ರೆಸ್ಟೋರೆಂಟ್​ಗಳಿಂದ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ. ಜೊತೆಗೆ, ಧಾರ್ಮಿಕ ಕ್ಷೇತ್ರಗಳು ಕೂಡ 7 ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚಲಿವೆ. ಮದುವೆ ಹಾಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡಿದೆ. ಸಾವು ಸಂಭವಿಸಿದಲ್ಲಿ ಕೇವಲ 20 ಮತ್ತು ವಿವಾಹ ಸಮಾರಂಭದಲ್ಲಿ ಕೇವಲ 50 ಜನರು ಸೇರಬಹುದು ಎಂದು ಸೂಚನೆ ನೀಡಲಾಗಿದೆ.

ನಾಳೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ, 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಮುಂದಿನ ಶುಕ್ರವಾರ ಪರಿಸ್ಥಿತಿಯನ್ನು ಮತ್ತೆ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿವಿಷನಲ್ ಕಮಿಷನರ್ ಸೌರಭ್ ರಾವ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಗುರುವಾರ 43,183 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕು ಆರಂಭವಾದ ಬಳಿಕ ಒಂದು ದಿನದ ಅವಧಿಯಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,56,163 ಆಗಿದೆ. ಗುರುವಾರ, ರಾಜ್ಯದಲ್ಲಿ ಒಟ್ಟು 249 ಸಾವು ಸಂಭವಿಸಿದ್ದು, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 54,898 ಆಗಿದೆ.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.