ದಾವಣಗೆರೆ : ದಾವಣಗೆರೆಯಲ್ಲಿ ಆಗಸ್ಟ್ 3 ರಿಂದ 16 ರವರೆಗೆ ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ವಿಧಿಸಿ ಎಂದು ದಾವಣಗೆರೆ ಡಿಸಿ ಆದೇಶಿಸಿದ್ದಾರೆ. ಈ ಸಮಯದಲ್ಲಿ ತುರ್ತು ಸೇವೆಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು, ಅನಗತ್ಯವಾಗಿ ಓಡಾಡುವವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾಂತೇಶ ಬೀಳಗಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ..
ಈಗಾಗಲೇ ಶನಿವಾರ ಮತ್ತು ಭಾನುವಾರ ದೇವರ ದರ್ಶನ, ಪ್ರಸಾದ ವಿತರಣೆ, ಉತ್ಸವ, ಮುಡಿ ಸೇವೆಗಳನ್ನು ಜಿಲ್ಲಾಡಳಿತ ನಿಷೇಧಿಸಿದೆ.