- ಬಂಡೀಪುರ ರಾತ್ರಿ ಸಂಚಾರಕ್ಕೆ ನಿಷೇಧ ತೆರವು ಮಾಡಲು ಮುಂದಾದ ಸರ್ಕಾರ (Night traffic restrictions in Bandipur forest)
- ರಾಜಕೀಯ ಲಾಬಿಗೆ ಮಣಿದು ಅವಕಾಶ ನೀಡದಿರಿ ಎಂದ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಆಗ್ರಹ
- ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಸಾವಿರಾರು ಜನರಿಂದ ಪಾದಯಾತ್ರೆ
Bengaluru: ರಾಜ್ಯ ಸರ್ಕಾರವು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ (Bandipur National Park) ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕದಂತೆ ಒತ್ತಾಯಿಸಿ ಹಾಗೂ ಕೇರಳ ಸರ್ಕಾರದ (Kerala Govt) ಲಾಬಿಗೆ ಮಣಿದು ಅವಕಾಶ ನೀಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ (Lahar Singh Siroya) ಅವರು ಆಗ್ರಹಿಸಿದ್ದಾರೆ.
ಅದರ ಬೆನ್ನಲ್ಲೇ ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಲಹರ್ ಸಿಂಗ್, ಎಷ್ಟೇ ರಾಜಕೀಯ ಒತ್ತಡಗಳು ಬಂದರೂ ಕೂಡ ಕರ್ನಾಟಕ ಸರ್ಕಾರ, ಬಂಡೀಪುರ ಅರಣ್ಯ ಪ್ರದೇಶದಲ್ಲಿ (Forest area) ರಾತ್ರಿ ಸಂಚಾರ ನಿಷೇಧವನ್ನು ಎತ್ತಿಹಿಡಿಯಬೇಕು. ಬಂಡೀಪುರವನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಂಡೀಪುರ ಅಭಯಾರಣ್ಯದ (Bandipur National Park) ಮೂಲಕ ತಮಿಳುನಾಡು (Tamil Nadu) ಹಾಗೂ ಕೇರಳ ರಾಜ್ಯಗಳಿಗೆ ಎರಡು ರಾಷ್ಟ್ರೀಯ ಹೆದ್ದಾರಿಗಳು (National Highway) ಹಾದು ಹೋಗಿವೆ. ಇಲ್ಲಿ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಸಾವನ್ನಪ್ಪುತ್ತಿದ್ದ ಕಾರಣ 2009 ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಆದೇಶಿಸಲಾಗಿತ್ತು.

ಕೆಲವು ಮಾಫಿಯಾಗಳಿಗೆ ಇದರಿಂದ ಭಾರಿ ಹೊಡೆತ ಬಿದ್ದಿದೆ. ಕೇರಳ ಸರ್ಕಾರವಂತೂ ಇಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರದ (State Govt) ಮೇಲೆ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಇದೀಗ ವಯನಾಡು ಸಂಸದೆ ಪ್ರಿಯಾಂಕಾ ವಾದ್ರಾ (Priyanka Vadra) ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.
ಇದರ ಜೊತೆಗೆ ವಯನಾಡ್ನಲ್ಲಿ (Wayanad) ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Sivakumar) ಅವರಹ ಸಹ ರಾತ್ರಿಯ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಭರವಸೆ ನೀಡಿದ್ದರು. ಇತ್ತೀಚಿಗೆ ಅರಣ್ಯ ಸಚಿವ ಈಶ್ವರಖಂಡ್ರೆ ಅರಣ್ಯ ಇಲಾಖೆಯ (Forest Department) ಹಿರಿಯ ಅಧಿಕಾರೊಗಳೊಡನೆ ಸಭೆಯನ್ನೂ ನಡೆಸಿದ್ದರು.
ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ರಾಜಕೀಯ ಹಿತಾಸಕ್ತಿಗೋಸ್ಕರ ನಿಷೇಧ ತೆರವುಗೊಳಿಸುವ ಆತಂಕ ಎದುರಾಗಿರುವುದರಿಂದ ಜನ, ಪರಿಸರ ಪ್ರೇಮಿಗಳು ಬೀದಿಗಿಳಿದಿದ್ದಾರೆ. ಬಂಡೀಪುರ ಉಳಿಸಿ ಅಭಿಯಾನ (Save Bandipur campaign) ನಡೆಸುತ್ತಿದ್ದಾರೆ.
ಇನ್ನು ಬಂಡೀಪುರದಲ್ಲಿ 2005 ಮತ್ತು 2007ರ ನಡುವೆ ವಾಹನ ಅಪಘಾತದಿಂದ 286 ವನ್ಯಜೀವಿಗಳು ಮೃತಪಟ್ಟಿವೆ. 2009ರಲ್ಲಿ ಕರ್ನಾಟಕ ಸರ್ಕಾರ (Government of Karnataka) ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೆ ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು ಅದು ಈಗಲೂ ಮುಂದುವರೆದಿದೆ.
ಈ ನಿರ್ಬಂಧವನ್ನು ಸುಪ್ರೀಂ ಕೋರ್ಟ್ (Supreme Court) ಕೂಡ ಎತ್ತಿ ಹಿಡಿದಿದೆ.2010 ಮತ್ತು 2018 ರ ನಡುವೆ, ವನ್ಯಜೀವಿಗಳ ಸಾವಿನ ಸಂಖ್ಯೆ 34 ಕ್ಕೆ ಇಳಿದಿತ್ತು. ಅಭಯಾರಣ್ಯದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದಿಂದ ವನ್ಯಜೀವಿಗಳಿಗೆ (wildlife) ಹಾನಿಯಾಗುವುದು ತಪ್ಪಿದೆ ಎನ್ನುವುದು ಇದರಿಂದ ಸಾಬೀತಾಗಿದೆ.
ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ, ಯಾದಗಿರಿಗೆ ಕೊನೆಯ ಸ್ಥಾನ!
ಕೇರಳ ಸರಕಾರವು (Kerala Govt) ನಿಷೇಧವನ್ನು ತೆಗೆದುಹಾಕುವಂತೆ ಅರ್ಜಿ ಸಲ್ಲಿಸಿದ ನಂತರ 2019ರಲ್ಲಿ ಸುಪ್ರೀಂ ಕೋರ್ಟ್ ನಿಷೇಧವನ್ನು ಎತ್ತಿ ಹಿಡಿಯಿತು.ಆದರೆ ದುರದೃಷ್ಟವಶಾತ್, ಇತ್ತೀಚಿಗೆ ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ (Vehicular traffic) ನಿಷೇಧವನ್ನು ತೆಗೆದುಹಾಕುವ ಪ್ರಯತ್ನ ಆರಂಭವಾಗಿದೆ.
ನವೆಂಬರ್ 2024ರಲ್ಲಿ, ನಿರ್ಬಂಧಗಳನ್ನು ಸಡಿಲಗೊಳಿಸುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು ಆತಂಕ ಉಂಟುಮಾಡಿತ್ತು. ನಿಷೇಧವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿ ವಯನಾಡ್ ಸಂಸದೆ (Wayanad MP) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತ್ರದಿಂದ ಈ ಬೇಡಿಕೆಗೆ ಇನ್ನಷ್ಟು ಉತ್ತೇಜನ ದೊರೆಯಿತು.
ಈ ಕ್ರಮಗಳು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ನಿಷೇಧವನ್ನು ತೆಗೆದುಹಾಕಲು ರಾಜಕೀಯ (Night traffic restrictions in Bandipur forest) ಒತ್ತಡಕ್ಕೆ ಮಣಿಯುತ್ತಿದೆ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ (Ishwar Khandre) ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ ಎಂದಿದ್ದಾರೆ.