Ramanagar: ರಾಮನಗರ (Ramanagar) ಮೆಡಿಕಲ್ ಕಾಲೇಜು ಸ್ಥಳಾಂತರದ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (Nikhil Kumaraswamy vs DK Shivakumar) ವಿರುದ್ಧ ಜೆಡಿಎಸ್
ಯುವ ಘಟಕದ ಅಧ್ಯಕ್ಷ ನಿಖಿಲ್ (Nikhil Kumaraswamy) ಕುಮಾರಸ್ವಾಮಿ ಕಿಡಿಕಾರಿದ್ದು, ಮೆಡಿಕಲ್ ವಿಚಾರದಲ್ಲಿ ಡಬಲ್ ಗೇಮ್ (Double Game) ಆಡುತ್ತಿರೋದು ಯಾವ ಪುರುಷಾರ್ಥಕ್ಕೆ
ಎಂದು ಪ್ರಶ್ನಿಸಿದ್ದಾರೆ. ಮತ್ತು ಸುಖಾ ಸುಮ್ಮನೆ ಗೊಂದಲ ಏಕೆ ಎಂದು ಅವರು ಕೇಳಿರುವುದಲ್ಲದೆ ಮೆಡಿಕಲ್ ಕಾಲೇಜಿಗಾಗಿ (Medical College) ನಡೆಯುತ್ತಿರುವ ಹೋರಾಟಕ್ಕೆ ನನ್ನ
ಸಂಪೂರ್ಣ ಬೆಂಬಲ (Nikhil Kumaraswamy vs DK Shivakumar) ಇದೆ ಎಂದು ಹೇಳಿದ್ದಾರೆ.

ಶುಕ್ರವಾರ ರಾಮನಗರದಲ್ಲಿ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ವಿರೋಧಿಸಿ ಬಂದ್ (Bandh) ಆಚರಿಸಲಾಗುತ್ತಿದ್ದು, ಬೆಳಗ್ಗೆ ರಾಜ್ಯ ಸರ್ಕಾರದ ನಡೆ ವಿರುದ್ಧ ಪ್ರತಿಭಟನೆ ಕೂಡ ನಡೆಸಲಾಯಿತು.
ಅಲ್ಲದೆ ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ
ರಾಮನಗರ ಬಂದ್‌ಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಹೋರಾಟದಲ್ಲಿ ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ
ನನ್ನ ಸಹಮತವಿದೆ ಎಂದಿದ್ದಾರೆ. 2006-07ರಲ್ಲೇ 310 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ (Rajiv Gandhi) ವಿವಿ ಸಮುಚ್ಚಯ ಸ್ಥಾಪನೆಗೆ
ಅಂದಿನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (H D Kumaraswamy) ಅವರು ಕೂಡ ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು ಎಂದು ಹೇಳಿದರು.

ತದ ಬಳಿಕ ಮತ್ತೆ 2019 ಮಾರ್ಚ್ 25ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನೆಯ ವೆಚ್ಚವನ್ನು 540 ಕೋಟಿ ರೂ.ಗೆ ಹೆಚ್ಚಿಸಿದ್ದರು. ಇನ್ನು ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೂ
(Kanakapura) ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಆ ಸಮಯದಲ್ಲಿ ಡಿಕೆ ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. ಅಲ್ಲದೆ 2018 ಡಿಸೆಂಬರ್ 13ರಂದು 450 ಕೋಟಿ ರೂ. ವೆಚ್ಚದ
ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು ಎಂದು ತಿಳಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ (DCM D K Shivakumar) ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ
ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಅವರೇ ಈ ಕುರಿತು ಹೇಳಿದ್ದರು. ಹಾಗಾದರೆ ಈ ಸರ್ಕಾರ ಯಾರನ್ನು ಯಾಮಾರಿಸಲು ಹೊರಟಿದೆ ಎಂದು ಡಿಕೆ ಶಿವಕುಮಾರ್
ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ 610 ಕೋಟಿ ರೂ. ವೆಚ್ಚದಲ್ಲಿ ಬಿಜೆಪಿ (BJP) ಸರ್ಕಾರವು ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ
ಹಿಂದೆ ಬಂದ ಕಾಂಗ್ರೆಸ್ (Congress) ಸರ್ಕಾರವು ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದು ಕಿಡಿಕಾರಿದ್ದಾರೆ.
ಇದನ್ನು ಓದಿ: ಮೆಡಿಕಲ್ ಕಾಲೇಜು ಸ್ಥಳಾಂತರ: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ
- ಭವ್ಯಶ್ರೀ ಆರ್.ಜೆ