• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಜನ್ಮದಿನಕ್ಕೆ ‘ಯದುವೀರ’ ಪೋಸ್ಟರ್ ಜೊತೆಗೆ ಬಂದ ನಿಖಿಲ್ ಕುಮಾರಸ್ವಾಮಿ.!

Preetham Kumar P by Preetham Kumar P
in ಮನರಂಜನೆ
nikhil kumar
0
SHARES
0
VIEWS
Share on FacebookShare on Twitter

ರೈಡರ್ಸ್ ಸಿನಿಮಾದ ನಂತರ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಒಳ್ಳೆ ಪ್ರಶಂಸೆ ಹಾಗೂ ಅಭಿಮಾನಿಗಳ ಬಳಗ ದೊಡ್ಡದಾಗುತ್ತಿದೆ. ಹೌದು, ಇತ್ತೀಚೆಗೆ ಕಳೆದ ವರ್ಷ ಬಿಡುಗಡೆಗೊಂಡ ರೈಡರ್ಸ್ ಸಿನಿಮಾ ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶಸ್ವಿಯಾಯಿತು. ಈ ಒಂದು  ಸಿನಿಮಾ ನಿಖಿಲ್ ಅವರಿಗೆ ಚಿತ್ರರಂಗದಲ್ಲಿ ಮುಂದುವರೆಯಲು ಬಲವಾದ  ಮತ್ತೊಂದು ಹೆಜ್ಜೆಗುರುತಾಯಿತು ಎನ್ನಬಹುದು. ಇಂದು ನಿಖಿಲ್ ಕುಮಾರಸ್ವಾಮಿ ಅವರು ತಮ್ಮ 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.  ಇನ್ನೊಂದು ಸಂದರ್ಭದಲ್ಲಿ ಹುಟ್ಟುಹಬ್ಬದ ದಿನಕ್ಕೆ ಯದುವೀರ ಚಿತ್ರತಂಡ  ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರಿಗೆ ನಿಖಿಲ್ ಕುಮಾರಸ್ವಾಮಿ ಎಂದು ಕರೆಯುವ ಬದಲು ಯದುವೀರ ನಿಖಿಲ್ ಕುಮಾರಸ್ವಾಮಿ ಎಂದು ಕರೆಯುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಚಿತ್ರರಂಗದ ಅನೇಕ ತಾರೆಯರು ಸೇರಿದಂತೆ ರಾಜಕಾರಣಿ ವ್ಯಕ್ತಿಗಳು, ದೊಡ್ಡ ಗಣ್ಯರು ನಿಖಿಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. 

ಯದುವೀರ ಸಿನಿಮಾ ನಿಖಿಲ್ ಅವರ ಸಿನಿಪಯಣದ ೫ನೇ ಸಿನಿಮಾವಾಗಿ ಹೊರಹೊಮ್ಮುತ್ತಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಉಂಟಾಗಿದ್ದು, ಮಂಜು ಅಥರ್ವ ಅವರು ನಿರ್ದೇಶನ ಮಾಡಿದ್ದಾರೆ. ಯದುವೀರ ಸಿನಿಮಾ ಮುಖೇನ ಪರಿಪೂರ್ಣ ನಿರ್ದೇಶಕನಾಗಿ ಮಂಜು ಅಥರ್ವ ಹೊರಹೊಮ್ಮುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಭರ್ಜರಿಯಾಗಿ ನಡೆಯಲಿದೆ ಎಂಬ ನಿರೀಕ್ಷೆಗಳು ತಲೆಕೆಳಗಾಗಿವೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದು, ಕೋವಿಡ್ ಸಂಕಷ್ಟದ ಸಮಯದಲ್ಲಿ ನನಗೆ ವಿಜೃಂಭಣೆಯ ಹುಟ್ಟುಹಬ್ಬ ಮಾಡಿಕೊಳ್ಳುವುದಕ್ಕೆ ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿಯೇ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ನನ್ನ ಪ್ರೀತಿಸುವ ಅಭಿಮಾನಿಗಳು, ನಮ್ಮ ಪಕ್ಷದ ಕಾರ್ಯಕರ್ತರು ಅಥವಾ ಹಿರಿಯರು ಯಾರೇ ಆಗಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡುವ ಮೂಲಕ ನನಗೆ ಹರಸಿ, ಹಾರೈಸಿ. ನೀವೆಲ್ಲಿದ್ದೀರೋ ಅಲ್ಲಿಂದಲೇ ನನಗೆ ಮನಸ್ಸಿನಿಂದ ಹರಸಿ, ಹಾರೈಸಿ ಅದೇ ನನಗೆ ದೊಡ್ಡ ಉಡುಗೊರೆ ಜೊತೆಗೆ ಈ ಬಾರಿಯ ಹುಟ್ಟುಹಬ್ಬಕ್ಕೆ ಅರ್ಥಪೂರ್ಣ ದೊರೆಯಲಿದೆ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಮುಖೇನ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಸರಳ, ಸುಂದರವಾಗಿ ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಯಾವುದೇ ರೀತಿಯ ಸಡಗರ, ಅದ್ಧೂರಿತನವನ್ನು  ಮಾಡದೆ ಕೋವಿಡ್ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬಕ್ಕೆ ಒಂದು ಅರ್ಥಪೂರ್ಣ ತಂದುಕೊಂಡಿದ್ದಾರೆ. ಒಟ್ಟಾರೆ ರೈಡರ್ಸ್ ಸಿನಿಮಾ ಹಿಟ್ ಆದ ನಂತರ, ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಚಿತ್ರರಂಗದಲ್ಲಿ ತಮ್ಮದೆ ಕಮಾಲ್ ಮಾಡಲು ನಿಖಿಲ್ ಕುಮಾರಸ್ವಾಮಿ ಅವರು ಸಜ್ಜಾಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ಸಂಗತಿಯಾಗಿದೆ.

Tags: actorJDSkannada cinemamoviesnikhil kumaraswamySandalwood

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.