ನಿಫಾ ವೈರಸ್ ಶಂಕೆ ರಾಜ್ಯದಲ್ಲಿ ಕಟ್ಟೆಚ್ಚರ

ಬೆಂಗಳೂರು ಸೆ 14 : ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನಿಫಾ ವೈರೆಸ್ ಸೋಂಕಿನ ಹಿನ್ನಲೆಯಲ್ಲಿ ಗೋವಾದಿಂದ ಮಂಗಳೂರಿನ ಆಗಮಿಸಿದ ವೈಕ್ತಿಯನ್ನ ಪರೀಕ್ಷೆಗೆ ಒಳಪಡಿಸಲಾಗಿದೆ.

ಗೋವಾದಲ್ಲಿ ಆರ್ಟಿ-ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ವೊಂದರಲ್ಲಿ ತಪಾಸಣೆಗೊಳಗಾದ ವ್ಯಕ್ತಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಜ್ವರ ಬಂದು ಗುಣಮುಖನಾಗಿದ್ದ. ಆದರೆ ನಿಫಾ ವೈರಸ್ ಬಂದಿರಬಹುದೆಂಬ ಶಂಕೆ ಹಿನ್ನೆಲೆ ಟೆಸ್ಟ್ ಮಾಡಿಸಿದ್ದಾನೆ

ಈತ ಗೋವಾದಿಂದ ಕಾರವಾರಕ್ಕೆ ಬಂದು, ಅಲ್ಲಿಂದ ಮಣಿಪಾಲಕ್ಕೆ ತೆರಳಿ ಅಲ್ಲಿಂದ ನೇರವಾಗಿ ಮಂಗಳೂರಿಗೆ ಬಂದಿದ್ದಾನೆ. ಈತನ ಮಾದರಿ ಪಡೆದಿರುವ ಆರೋಗ್ಯ ಇಲಾಖೆ ಪರೀಕ್ಷೆಗೆ ಕಳಿಸಿದ್ದು, ಸೆ.೧೫ರೊಳಗೆ ವರದಿ ಬರಲಿದೆ. ಆತನನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ :
ಕೇರಳ ರಾಜ್ಯದಲ್ಲಿ ಇತ್ತೀಚೆಗೆ ಹರಡುತ್ತಿರುವ ನಿಫಾ ವೈರಸ್ ಹಿನ್ನಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳು ಹೈ ಅಲರ್ಟ್ ಆಗಿವೆ. ಕೇರಳ ಮತ್ತು ಚಾಮರಾಜನಗರ ಜಿಲ್ಲೆಗಳ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕೇರಳದಿಂದ ಆಗಮಿಸುವವರ ಮೇಲೆ ಕಟ್ಟುನಿಟ್ಟಾದ ಮೇಲ್ವಿಚಾರಣೆ ಜಾರಿಗೊಳಿಸಲಾಗಿದೆ. ಅದಾಗ್ಯೂ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇದುವರೆಗೂ ಯಾವುದೇ ನಿಫಾ ಪ್ರಕರಣಗಳು ವರದಿಯಾಗಿಲ್ಲ. ಹಾಗಾಗಿ ಈ ಜಿಲ್ಲೆಗಳಲ್ಲಿ ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Exit mobile version