New Delhi : ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಕಾಂಗ್ರೆಸ್ ಮಾಡಿದ ಆರೋಪವನ್ನು ತಳ್ಳಿ ಹಾಕಿದ್ದು, ಕುಟುಂಬ ಸಂಬಂಧಕ್ಕೆ (Nirmala Sitharaman about congress) ಪ್ರಯೋಜನವಾಗುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ನೇತೃತ್ವದ ಸರ್ಕಾರ ಇಡೀ ರಾಷ್ಟ್ರವನ್ನು ಗಮನದಲ್ಲಿಟ್ಟುಕೊಂಡು ನೀತಿಗಳನ್ನು ರೂಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರ್ಮನ್ ಅವರು ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಬಜೆಟ್ ಅನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪಕ್ಷ ಮಾಡಿದ ಆರೋಪಕ್ಕೆ ಪ್ರತಿಕ್ರಿಯೇ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು,
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಗುರಿಯಾಗಿಸಿ ಪರೋಕ್ಷವಾಗಿ ತಿರುಗೇಟು ನೀಡಿದರು,

ಯಾರನ್ನೋ ಗಮನದಲ್ಲಿಟ್ಟುಕೊಂಡು ಹಂಚಿಕೆ ಮಾಡಲಾಗಿದೆ ಎಂಬ ಹೇಳಿಕೆಗಳನ್ನು (Nirmala Sitharaman about congress) ನೀಡುವುದು ತಪ್ಪು! ನರೇಂದ್ರ ಮೋದಿ ಅವರ ಸರ್ಕಾರದ ಅಡಿಯಲ್ಲಿ,
ನಾವು ಹಣವನ್ನು ಹಂಚಿಕೆ ಮಾಡುವಾಗ ಯಾರೋ ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದಿಲ್ಲ,
ಇಡೀ ರಾಷ್ಟ್ರವನ್ನು ಗಮನದಲ್ಲಿಟ್ಟುಕೊಂಡು ಮಾಡುತ್ತೇವೆ. ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದು ಕಾಂಗ್ರೆಸ್(Congress) ಸಂಸ್ಕೃತಿ! ಎಂದು ಹೇಳಿದರು.

ಮಾತು ಮುಂದುವರಿಸಿದ ನಿರ್ಮಲಾ ಸೀತಾರಾಮನ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ನಮ್ಮಲ್ಲಿ ಯಾರೂ ಏನನ್ನೂ ಮಾಡುವುದಿಲ್ಲ.
ಯುಎಸ್(US) ಮೂಲದ ಶಾರ್ಟ್-ಸೆಲ್ಲರ್ ಸಂಸ್ಥೆ ನೀಡಿದ ವರದಿಯ ನಂತರ ಅದಾನಿ ಗ್ರೂಪ್‌ನ(Adani Group) ಮಾರುಕಟ್ಟೆ ಬಂಡವಾಳೀಕರಣದಲ್ಲಿ ಭುಗಿಲೆದ್ದಿರುವ ವೈಫಲ್ಯದ ಹಿನ್ನೆಲೆಯಲ್ಲಿ ಈ ಆರೋಪವನ್ನು ಮಾಡಲಾಗಿದೆ.
ವರದಿಯು ಅದಾನಿ ಗ್ರೂಪ್‌ನ ಷೇರುಗಳ ಭಾರೀ ಕುಸಿತವನ್ನು ಪ್ರಚೋದಿಸಿತು. ಹೀಗಾಗಿ, ಸಂಸತ್ತಿನಲ್ಲಿ ನಮ್ಮ ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರತಿಪಕ್ಷಗಳು ಭಾರಿ ಕಸರತ್ತು ನಡೆಸುತ್ತಿದೆ ಎಂದು ಹೇಳಿದರು.
ಸದ್ಯ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯೇ ಆಗಲಿ
ಅಥವಾ ಕಾಂಗ್ರೆಸ್ ಪಕ್ಷದ ನಾಯಕರೇ ಆಗಲಿ ಪ್ರತಿಕ್ರಿಯೆ ನೀಡಿಲ್ಲ! ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿತ್ತ ಸಚಿವೆ ಅವರ ತಿರುಗೇಟು ಇದಾಗಿದೆ ಎಂಬುದು ಅವರ ಹೇಳಿಕೆಯಿಂದ ಇದೀಗ ಸ್ಪಷ್ಟವಾಗಿದೆ.