• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿಥಾರಿ ಹತ್ಯಾಕಾಂಡ: ಈ ಪ್ರಕರಣದ 2ನೇ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಜೈಲಿನಿಂದ ಬಿಡುಗಡೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ನಿಥಾರಿ ಹತ್ಯಾಕಾಂಡ: ಈ ಪ್ರಕರಣದ 2ನೇ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಜೈಲಿನಿಂದ ಬಿಡುಗಡೆ
0
SHARES
1k
VIEWS
Share on FacebookShare on Twitter

Uttar Pradesh: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ 21 ಮಕ್ಕಳ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ನಿಥಾರಿ ಹತ್ಯಾಕಾಂಡ ಪ್ರಕರಣದ 2ನೇ ಆರೋಪಿ ಮಣಿಂದರ್ ಸಿಂಗ್ ಪಂಧೇರ್ (Maninder Singh Pandher) ಜೈಲಿನಿಂದ ಬಿಡುಗಡೆ ಆಗಿದ್ದು, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಇರುವ ಲುಕ್ಸಾರ್ ಕಾರಾಗೃಹದಿಂದ ಈ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.

ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ (Allahabad Highcourt) ಕಳೆದ ಸೋಮವಾರವಷ್ಟೇ 65 ವರ್ಷದ ವಯಸ್ಸಿನ ಉದ್ಯಮಿ ಮಣಿಂದರ್ ಸಿಂಗ್ ಪಂಧೇರ್‌ನನ್ನು ಆರೋಪ ಮುಕ್ತಗೊಳಿಸಿದ್ದು, ಈ ಪ್ರಕರಣದ ಪ್ರಮುಖ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಮನೆ ಕೆಲಸದ ಆಳು ಸುರೇಂದರ್ ಕೋಲಿ (Surendar Koli) ವಿರುದ್ಧದ ದಾಖಲಾಗಿದ್ದ ಹಲವು ಪ್ರಕರಣಗಳ ಪೈಕಿ 12 ಪ್ರಕರಣಗಳಲ್ಲಿ ದೋಷ ಮುಕ್ತಗೊಳಿಸಿತ್ತು.

ಈ ಸರಣಿ ಹತ್ಯಾಕಾಂಡವು 2005 – 2006ರ ನಡುವೆ ನಡೆದಿದ್ದು, ಸರ್ಕಾರಿ ವಕೀಲರು ಆರೋಪಿಗಳ ವಿರುದ್ಧದ ದೋಷಾರೋಪವನ್ನು ಸಾಬೀತು ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳಲ್ಲಿ ಆರೋಪಗಳನ್ನು ಖುಲಾಸೆಗೊಳಿಸಲಾಗಿತ್ತು.

ಆರೋಪಿಗಳನ್ನು ಕೇವಲ ಅನುಮಾನದ ಆರೋಪದ ಮೇಲೆ ಬಂಧಿಸಿ ಅವರ ವಿರುದ್ಧ ದೋಷಾರೋಪಪಟ್ಟಿ ದಾಖಲು ಮಾಡಲಾಗಿದ್ದು, ಪೊಲೀಸರ ತನಿಖಾ ಪ್ರಕ್ರಿಯೆ ಬಗ್ಗೆಯೇ ಅನುಮಾನಗಳು ವ್ಯಕ್ತವಾಗಿವೆ. ಆರೋಪಿಗಳ ವಿರುದ್ಧ ಆರೋಪಿಸಲಾಗಿದ್ದ ಅನುಮಾನಾಸ್ಪದ ಕೃತ್ಯವನ್ನು ಸಾಬೀತು ಮಾಡಲು ಸರ್ಕಾರಿ ವಕೀಲರು ವಿಫಲರಾಗಿದ್ದರೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತ್ತು.

Jail

ಲುಕ್ಸಾರ್ ಕಾರಾಗೃಹದ ವರಿಷ್ಠಾಧಿಕಾರಿ ಅರುಣ್ ಪ್ರತಾಪ್ ಸಿಂಗ್ (Arun Pratap Singh) ಅವರು, ನಿಥಾರಿ ಹತ್ಯಾಕಾಂಡ ಪ್ರಕರಣದಲ್ಲಿ ಮಣಿಂದರ್ ಸಿಂಗ್ ಪಂಧೇರ್ ದೋಷ ಮುಕ್ತ ಎಂದು ಹೇಳಿತ್ತು. ಇದೀಗ ಆರೋಪಿಯ ಬಿಡುಗಡೆಗೆ ಎರಡನೇ ಆದೇಶವೂ ನ್ಯಾಯಾಲಯದಿಂದ ಸಿಕ್ಕಿದೆ. ಹಾಗಾಗಿ ಆತನನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೈಲಿನ ವರಿಷ್ಠಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ ಒಂದು ಗಂಟೆ ಬಳಿಕ ಕಾರಾಗೃಹದ ಎಲ್ಲಾ ಪ್ರಕ್ರಿಯೆಗಳನ್ನೂ ಮುಕ್ತಾಯಗೊಳಿಸಿ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುರೇಂದರ್ ಕೋಲಿ ಇನ್ನೂ ಕೂಡಾ ಜೈಲಿನಲ್ಲೇ ಇದ್ದಾನೆ. ಈತನನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನ (Ghaziabad) ದಸ್ನಾ ಕಾರಾಗೃಹದಲ್ಲಿ ಇರಿಸಲಾಗಿದ್ದು, ಆರೋಪಿಗಳಿಗೆ ಈ ಹಿಂದೆ ಕೆಳ ನ್ಯಾಯಾಲಯ ವಿಧಿಸಿದ್ದ ಮರಣ ದಂಡನೆ ಶಿಕ್ಷೆಯನ್ನು ರದ್ದು ಮಾಡಲಾಗಿದೆ.

ಒಟ್ಟು 18 ಪ್ರಕರಣಗಳ ಪೈಕಿ 12 ಪ್ರಕರಣಗಳಲ್ಲಿ ಸುರೇಂದರ್ ಕೋಲಿ ಖುಲಾಸೆ ಆಗಿದ್ದಾನೆ. ಇನ್ನೂ 4 ಪ್ರಕರಣಗಳು ಆತನ ಮೇಲಿವೆ. ಈ ಪ್ರಕರಣಗಳ ಅಡಿ ಆರೋಪಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. 14 ವರ್ಷದ ಬಾಲಕಿಯ ಹತ್ಯೆ ಪ್ರಕರಣದ ಅಡಿ ಆರೋಪಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ಮಕ್ಕಳ ಅಸ್ಥಿ ಪಂಜರವು ನೋಯ್ಡಾದ ಚರಂಡಿಗಳಲ್ಲಿ ಪತ್ತೆಯಾಗುವ ಮೂಲಕ ಈ ಪ್ರಕರಣ ಬೆಳಕಿಗೆ ಬಂದಿತ್ತು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಭೀಕರ ಕೊಲೆ, ನರ ಮಾಂಸ ಭಕ್ಷಣೆ ಸೇರಿದಂತೆ ಹಲವು ಆರೋಪಗಳು ಇಬ್ಬರೂ ಆರೋಪಿಗಳ ಮೇಲಿವೆ. ಪೊಲೀಸರ ತನಿಖೆ ಮುಂದುವರೆದಂತೆ ಹಲವು ಅಸ್ಥಿ ಪಂಜರಗಳು ಪತ್ತೆಯಾದವು. ಈ ಮೂಲಕ ಈ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು.

ಭವ್ಯಶ್ರೀ ಆರ್.ಜೆ

Tags: jailmaninder singh pandherreleaseuttar pradesha

Related News

ಸರ್ಕಾರಿ ಕಚೇರಿಗಳು ಹಾಗೂ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಗೆ ನಿಷೇಧ; ಮುಖ್ಯಮಂತ್ರಿಗಳಿಂದ ಹೊಸ ಆದೇಶ
ಪ್ರಮುಖ ಸುದ್ದಿ

ಸರ್ಕಾರಿ ಕಚೇರಿಗಳು ಹಾಗೂ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಗೆ ನಿಷೇಧ; ಮುಖ್ಯಮಂತ್ರಿಗಳಿಂದ ಹೊಸ ಆದೇಶ

November 1, 2025
ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು
ಪ್ರಮುಖ ಸುದ್ದಿ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು

October 31, 2025
ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ
ಪ್ರಮುಖ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ

October 31, 2025
ಬೆಂಗಳೂರು ನಗರದಲ್ಲಿ ಕಸ ಸುರಿಯುವ ಹಬ್ಬ: ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿಸಿ ದಂಡ ವಸೂಲಿ ಮಾಡಿದ ಜಿಬಿಎ
ಪ್ರಮುಖ ಸುದ್ದಿ

ಬೆಂಗಳೂರು ನಗರದಲ್ಲಿ ಕಸ ಸುರಿಯುವ ಹಬ್ಬ: ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿಸಿ ದಂಡ ವಸೂಲಿ ಮಾಡಿದ ಜಿಬಿಎ

October 31, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.