• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು – ಸಿದ್ದರಾಮಯ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ  ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು – ಸಿದ್ದರಾಮಯ್ಯ
0
SHARES
28
VIEWS
Share on FacebookShare on Twitter

Kolar: ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ. ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು.  ಇಂದು ರಾಜ್ಯದಲ್ಲಿ ವಾತಾವರಣ ಕಾಂಗ್ರೆಸ್ (No BJP party in Kolar)ಪರವಾಗಿ ಬದಲಾಗುತ್ತಿದೆ.

ಸೋನಿಯಾ ಗಾಂಧಿ(Sonia gandhi),  ರಾಹುಲ್‌ಗಾಂಧಿ(Rahul gandhi) ಮತ್ತು  ಖರ್ಗೆ(Kharge) ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ.

ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.  ಜನವರಿ 23ರಂದು ಕೋಲಾರದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ, ಅದಕ್ಕೆ ಇಡೀ ಜಿಲ್ಲೆಯ ಜನ ಬರಬೇಕು.

ಆಗ ನಿಮ್ಮೊಂದಿಗೆ ಕೆಲವು ಮಹತ್ವದ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

No BJP party in Kolar

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ನಂತರ ಈ ಕುರಿತು ಸರಣಿ ಟ್ವೀಟ್‌(tweet) ಮಾಡಿರುವ ಅವರು,  ಕೋಲಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಮನವಿ ಮಾಡಿದ್ದಾರೆ,

ನಾವು ಅಧಿಕಾರಕ್ಕೆ ಬಂದ ತಕ್ಷಣ ಆಸ್ಪತ್ರೆಯನ್ನು ಮಂಜೂರು ಮಾಡಿ ಸ್ಥಾಪನೆ ಮಾಡುವ ಕೆಲಸ ಮಾಡುತ್ತೇವೆ. ನಮ್ಮದು ನುಡಿದಂತೆ ನಡೆಯುವ ಸಿದ್ಧಾಂತ. 

ಮನಮೋಹನ್ ಸಿಂಗ್(Manmohan singh) ಅವರ ಸರ್ಕಾರ 78,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿತ್ತು. ನಾನು 22,27,000 ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. 

ಮೋದಿ(Narendra Modi) ಅಥವಾ ಬೊಮ್ಮಾಯಿ(Basavaraj bommai) ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಿದ್ದಾರ? 

ಬಿಜೆಪಿ ಒಂದು ಸುಳ್ಳಿನ ಫ್ಯಾಕ್ಟರಿ. ಅವರಿಗೆ ಜನ ಶಾಂತಿ, ನೆಮ್ಮದಿಯಿಂದ ಇರುವುದು ಬೇಡ. ಜನರ ಮಧ್ಯೆ ಜಗಳ ತಂದಿಟ್ಟು ಅದರಿಂದ ರಾಜಕೀಯ ಲಾಭ ಪಡೆಯಲು ಚಿಂತಿಸುವವರು ಅವರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ರೂ.24,000 ಕೋಟಿ ಬೇಕಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ಬದ್ಧರಿದ್ದೇವೆ.

ಇದನ್ನೂ ಓದಿ: https://vijayatimes.com/joint-pain-in-winter/

5 ವರ್ಷಗಳಲ್ಲಿ 2 ಲಕ್ಷ ಕೋಟಿ ಹಣವನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ. 

ನಾವು ಕೆ.ಸಿ ವ್ಯಾಲಿ ಯೋಜನೆಗೆ 1,400 ಕೋಟಿ ಅನುದಾನ ನೀಡಿ, ಜಾರಿ ಮಾಡಿದ್ದೆವು, ಎನ್,ಸಿ ವ್ಯಾಲಿ ಯೋಜನೆ ಜಾರಿ ಮಾಡಿದ್ದೆವು. ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿ ಭೂಮಿ ಪೂಜೆ ಮಾಡಿದ್ದು ನಮ್ಮ ಕಾಲದಲ್ಲಿ.

ಕಾಂಗ್ರೆಸ್(Congress) ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಈ ಯೋಜನೆಯನ್ನು ಪೂರ್ಣಗೊಳಿಸುತ್ತಿದ್ದೆವು.  ಕೋಲಾರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸುದರ್ಶನ್ ಅವರು ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ.

congress leader

ಇಲ್ಲಿಂದಲೇ ಚುನಾವಣೆಗೆ ನಿಂತು ಶಾಸಕನಾದರೆ ಕ್ಷೇತ್ರವೂ ಸೇರಿದಂತೆ ಇಡೀ ಕೋಲಾರದ ಅಭಿವೃದ್ಧಿಗೆ ವಿಶೇಷ ಮಹತ್ವ ಕೊಡುತ್ತೇನೆ.

ಇದರಲ್ಲಿ ಅನುಮಾನವೇ ಬೇಡ.  ಕೋಲಾರ ಕ್ಷೇತ್ರದಿಂದ ಆಯ್ಕೆಯಾದರೆ ಪ್ರತೀ ವಾರ ಕ್ಷೇತ್ರಕ್ಕೆ ಬರುತ್ತೇನೆ. ಜನ ಮಧ್ಯವರ್ತಿಗಳಿಲ್ಲದೆ ನನ್ನನ್ನು ಭೇಟಿ ಮಾಡಬಹುದು.

ಸಾಮಾನ್ಯ ವ್ಯಕ್ತಿಯೂ ಬಂದು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಇದು ನಾನು ನಡೆಸಿಕೊಂಡು ಬಂದಿರುವ ಸಂಪ್ರದಾಯ ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಕೋಲಾರದಿಂದ ನಾನು ಸ್ಪರ್ಧಿಸಿದರೆ ನಾನು ಸ್ಪರ್ಧಿಸದೆ ಬೆಂಬಲ ನೀಡುತ್ತೇನೆ ಎಂದು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ(Srinivas gowda) ಅವರು ಹೇಳಿದ್ದಾರೆ.

ಅವರ ಅಭಿಮಾನಕ್ಕೆ ನಾನು ಕೃತಜ್ಞನಾಗಿದ್ದೇನೆ.  ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.

ದೂರದ ಕಾರಣಕ್ಕೆ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲವೆಂದು ತೀರ್ಮಾನಿಸಿದ್ದರೂ ಹೆಲಿಕಾಪ್ಟರ್ ಖರೀದಿ ಮಾಡಿ ಕೊಡುತ್ತೇವೆ, ನೀವು ವಾರಕ್ಕೊಂದು ಬಾರಿ ಬಂದು ಹೋಗಿ ಎಂದು ಆ ಕ್ಷೇತ್ರದ ಜನ ಹೇಳುತ್ತಿದ್ದಾರೆ. 

ಇದನ್ನೂ ಓದಿ: https://vijayatimes.com/iam-hindu-but-against-hinduism/

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪವರು(KH Muniyappa) ಸೇರಿದಂತೆ ಕೋಲಾರ ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಲೇ ಇದ್ದರು.. ಎಲ್ಲ ಜಾತಿ, ಧರ್ಮಗಳ ಜನರು ಮತ್ತು ಧಾರ್ಮಿಕ ಗುರುಗಳ ಅಪೇಕ್ಷೆಯೂ ಇದೇ ಆಗಿದೆ.

ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದಾಗ ಅವರೆಲ್ಲರ ಜೊತೆ ಮಾತನಾಡಿದ್ದೇನೆ. 

ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದು. ಸಿದ್ದರಾಮಯ್ಯ ಎಂಬ ಕಾರಣಕ್ಕೆ ವಿಶೇಷ ಅವಕಾಶ, ರಿಯಾಯಿತಿ ಇಲ್ಲ ಎಂದಿದ್ದಾರೆ.

Tags: CongresskolarSiddaramaiah

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.