ಕಾಬೂಲ್, ಆ. 18: ಯಾವುದೇ ದೇಶದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುವುದಿಲ್ಲ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಮಂಗಳವಾರ ತಡರಾತ್ರಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ.
ಹಿಂದಿನ ಸರ್ಕಾರದ ಜತೆ ಕೆಲಸ ಮಾಡಿದವರ ಮತ್ತು ವಿದೇಶಿ ಸರ್ಕಾರಗಳು ಅಥವಾ ಪಡೆಗಳ ಜತೆ ಕೆಲಸ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳುವುದಿಲ್ಲ, ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು ಎಂದು ಮುಜಾಹಿದ್ ಹೇಳಿದ್ದಾರೆ.
ನಾವು ಅಫ್ಗನ್ ಜನರಿಗೆ ಸಂಪೂರ್ಣವಾಗಿ ಕ್ಷಮಾದಾನ ನೀಡಿದ್ದೇವೆ, ಸರ್ಕಾರ ರಚನೆಯ ಕುರಿತು ಮಾತುಕತೆಗಳು ನಡೆಯುತ್ತಿದ್ದು ಇಸ್ಲಾಮಿಕ್ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಇಲ್ಲಿ ಖಾಸಗಿ ಮಾಧ್ಯಮಗಳು ಸ್ವತಂತ್ರವಾಗಿ ಕೆಲಸ ಮಾಡಬೇಕು, ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ.