ಮೂಡಿಗೆರೆ ʻವಿಜಯ ಸಂಕಲ್ಪ ಯಾತ್ರೆʼಗೆ ಬಿ.ಎಸ್‌ವೈ ಎಂಟ್ರಿ ರದ್ದು!

Chikkamaglur : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆಯಬೇಕಿದ್ದ ವಿಜಯ ಸಂಕಲ್ಪ ಯಾತ್ರೆಯ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಹೊರಡಬೇಕಿದ್ದ ಬಿಜೆಪಿಯ (BJP) ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ(B.S.Yeddiyurappa) ಅವರು ಇದೀಗ ತಮ್ಮ ಭೇಟಿಯನ್ನು (no entry for yeddiyurappa) ರದ್ದುಗೊಳಿಸಿದ್ದಾರೆ.


ಮೂಡಿಗೆರೆ ತಾಲೂಕಿನಲ್ಲಿ ಸ್ಥಳೀಯ ಶಾಸಕರ ವಿರುದ್ಧ ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಚುನಾವಣಾ ಪ್ರಚಾರ ಕಾರ್ಯಕ್ರವನ್ನು ರದ್ದುಗೊಳಿಸಿದ್ದಾರೆ.

ಚಿಕ್ಕಮಗಳೂರಿನ ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ(M.P.Kumarswamy) ವಿರುದ್ಧವೇ ಪಕ್ಷದ ಬೆಂಬಲಿಗರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

ಅವರು ತಮ್ಮ ವಿಜಯ ಸಂಕಲ್ಪ ಯಾತ್ರೆಯ ಪ್ರಚಾರ ಕಾರ್ಯಕ್ರವನ್ನು ದಿಢೀರ್‌ ಎಂಬಂತೆ ರದ್ದುಗೊಳಿಸಿದ್ದಾರೆ.

ಅಷ್ಟಕ್ಕೂ ಕಾರಣವೇನು ಎಂಬುದನ್ನು ತಿಳಿಯುವುದಾದರೆ, ಚಿಕ್ಕಮಗಳೂರಿನ ಮೂಡಿಗೆರೆ ಕ್ಷೇತ್ರದಲ್ಲಿ ಗುರುವಾರ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ

ಪಕ್ಷದ ಬೆಂಬಲಿಗರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಚುನಾವಣಾ ಪ್ರಚಾರ ರದ್ದುಗೊಳಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿ.ಎಸ್‌ ಯಡಿಯೂರಪ್ಪ ಹಾಗೂ ಡಿ.ವೈ ಸದಾನಂದ ಗೌಡ (D.Y.Sadananda Gowda)ಅವರು ತಮ್ಮ ಆಗಮನವನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ಮೂಡಿಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ (BJP)ಮುಖಂಡ ಸದಾನಂದ ಗೌಡ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಬೇಕಿತ್ತು.

ಆದರೆ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ಪ್ರಚಾರ ಮಾಡಬಾರದು ಮತ್ತು ಶಾಸಕ ಕುಮಾರಸ್ವಾಮಿ (no entry for yeddiyurappa) ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಕ್ಷೇತ್ರದ ಜನತೆಗೆ ಶಾಸಕರು ಕೈಗೆ ಸಿಗುತ್ತಿಲ್ಲ ಎಂದು ಬಿಜೆಪಿ ಬೆಂಬಲಿಗರು ಆರೋಪಿಸಿದ್ದಾರೆ. ಎಂಎಲ್‌ಸಿ ಚುನಾವಣೆಯಲ್ಲೂ ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

ಸ್ಥಳೀಯ ಮುಖಂಡರು ಸಹ ಶಾಸಕರ ವಿರುದ್ಧ ನಿಕಟ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ರಾಜ್ಯದಲ್ಲಿ ದಿನೇ ದಿನೇ ವಿಧಾನಸಭಾ ಚುನಾವಣೆಯ ಕಾವು ಹೆಚ್ಚುತ್ತಿದ್ದು, ಪಕ್ಷಗಳ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಈ ವರ್ಷ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Exit mobile version