ಐಡಿ ಕಾರ್ಡ್ ಇಲ್ಲದಿದ್ದರೆ (No entry without ID card to pub) ಎಂಟ್ರಿ ಇಲ್ಲ: ಪಬ್, ಬಾರ್‌ಗಳಿಗೆ ಸರ್ಕಾರದ ಹೊಸ ನಿಯಮ
ಅಪ್ರಾಪ್ತ ವಯಸ್ಕರ ಮದ್ಯಪಾನ ತಡೆಯಲು ರಾಜ್ಯ ಸರ್ಕಾರದಿಂದ ಕಠಿಣ ಮಾರ್ಗಸೂಚಿ ಜಾರಿ
ವಯಸ್ಸಿನ ಪರಿಶೀಲನೆ ಕಡ್ಡಾಯ, ನಿಯಮ ಉಲ್ಲಂಘಿಸಿದರೆ ಮಾಲೀಕರೇ ಹೊಣೆ
Bengaluru : ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನವರಲ್ಲಿ ಹೆಚ್ಚುತ್ತಿರುವ (No entry without ID card to pub) ಮದ್ಯಪಾನ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.
ಇನ್ನು ಮುಂದೆ ಮಾನ್ಯವಾದ ಗುರುತಿನ ಚೀಟಿ (ID Card) ಇಲ್ಲದೆ ಪಬ್, ಬಾರ್, ಕ್ಲಬ್, ಬ್ರೂವರಿ (Brewery) , ಲಾಂಜ್ ಹಾಗೂ ಮದ್ಯ ಮಾರಾಟ ಮಾಡುವ ಯಾವುದೇ ಸಂಸ್ಥೆಗಳಿಗೆ ಪ್ರವೇಶ ನೀಡಬಾರದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಮದ್ಯ ಮಾರಾಟ ಮತ್ತು ಸೇವೆ ಒದಗಿಸುವ ಎಲ್ಲಾ ಸಂಸ್ಥೆಗಳಿಗೆ ಅಧಿಕೃತ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ.
ಸಾರ್ವಜನಿಕ ಆರೋಗ್ಯ ಮತ್ತು ಯುವಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು (No entry without ID card to pub) ಈ ಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಗೃಹ ಸಚಿವರ ಸೂಚನೆಯಂತೆ, ಮದ್ಯ ಮಾರಾಟ ಮಾಡುವ ಎಲ್ಲಾ ಸಂಸ್ಥೆಗಳು ಪ್ರವೇಶ ದ್ವಾರದಲ್ಲೇ ಗ್ರಾಹಕರ ವಯಸ್ಸನ್ನು ಪರಿಶೀಲಿಸುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಜಾರಿಗೆ
ತರಬೇಕು. ಕೇವಲ ಪ್ರವೇಶ ನೀಡುವಾಗ ಮಾತ್ರವಲ್ಲದೆ, ಮದ್ಯ ಪೂರೈಕೆ ಮಾಡುವ ಮೊದಲು ಸಹ ಸರ್ಕಾರದಿಂದ ಮಾನ್ಯತೆ ಪಡೆದ ವಯಸ್ಸಿನ ಪುರಾವೆಯನ್ನು ಪರಿಶೀಲಿಸಬೇಕು.
ಅಪ್ರಾಪ್ತ ವಯಸ್ಕರಿಗೆ ಮದ್ಯ ಸೇವನೆಗೆ ಅವಕಾಶ ನೀಡುವುದು ಅಥವಾ ಅವರಿಗೆ ಮದ್ಯ ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳಲ್ಲಿ ಸಂಸ್ಥೆಗಳ
ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಇದರಿಂದ ಪಬ್ ಮತ್ತು ಬಾರ್ ಸಂಸ್ಕೃತಿಯಲ್ಲಿ ನಿಯಮ ಪಾಲನೆಗೆ ಹೆಚ್ಚಿನ ಒತ್ತು ಸಿಗುವ ನಿರೀಕ್ಷೆಯಿದೆ.
ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣವೆಂದರೆ ಬೆಂಗಳೂರಿನಲ್ಲಿ ನಡೆಸಲಾದ ಇತ್ತೀಚಿನ ಅಧ್ಯಯನ. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು
ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಂಶೋಧಕರು ನಡೆಸಿದ ಸಮೀಕ್ಷೆಯಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡ ಅಧ್ಯಯನದಿಂದ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ.
ಅಧ್ಯಯನದ ಪ್ರಕಾರ, ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ ತಂಬಾಕು ಬಳಕೆಯಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇ.33ರಷ್ಟು ವಿದ್ಯಾರ್ಥಿಗಳು ಮದ್ಯಪಾನದ ವ್ಯಸನಕ್ಕೆ ಒಳಗಾಗಿರುವುದು ಮತ್ತು ಶೇ.18ರಷ್ಟು ಮಂದಿ ತಂಬಾಕು ಬಳಕೆಯ ಅಭ್ಯಾಸ ಹೊಂದಿರುವುದು ಕಂಡುಬಂದಿದೆ. ಈ ಅಂಕಿಅಂಶಗಳು ಯುವ ಸಮುದಾಯದ ಭವಿಷ್ಯದ ಬಗ್ಗೆ ಗಂಭೀರ ಕಳವಳ ಮೂಡಿಸಿವೆ.
ಇನ್ನಷ್ಟು ಆತಂಕಕಾರಿ ಸಂಗತಿಯೆಂದರೆ, ಮದ್ಯಪಾನ ಆರಂಭಿಸುವ ಸರಾಸರಿ ವಯಸ್ಸು 17 ವರ್ಷ ಎಂದು ಅಧ್ಯಯನ ತಿಳಿಸಿದೆ. ಕೆಲವು ಪ್ರಕರಣಗಳಲ್ಲಿ ಕೇವಲ 8 ವರ್ಷದ ಮಕ್ಕಳೇ ಮದ್ಯಪಾನಕ್ಕೆ ಪರಿಚಿತರಾಗಿರುವುದು ದಾಖಲಾಗಿರುವುದು ಸಮಾಜದ ಮುಂದೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ಹಿನ್ನೆಲೆ ಸರ್ಕಾರ ಸಮಸ್ಯೆಯನ್ನು ಕೇವಲ ಪರವಾನಗಿ ಅಥವಾ ನಿಯಮ ಉಲ್ಲಂಘನೆಯ ವಿಚಾರವಾಗಿ ನೋಡದೇ, ಸಾರ್ವಜನಿಕ ಆರೋಗ್ಯ ಮತ್ತು ಮಕ್ಕಳ ಸುರಕ್ಷತೆಯ ವಿಚಾರವಾಗಿ ಪರಿಗಣಿಸುತ್ತಿದೆ.
ಅಪ್ರಾಪ್ತರ ಮೇಲೆ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ತಡೆಯಲು ಸಮಾಜದ ಎಲ್ಲ ವರ್ಗಗಳ ಸಹಭಾಗಿತ್ವ ಅಗತ್ಯವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಹೊಸ ಮಾರ್ಗಸೂಚಿಗಳ ಪ್ರಕಾರ, ಸಂಸ್ಥೆಗಳ ಪ್ರವೇಶ ದ್ವಾರದಲ್ಲಿನ ಸಿಸಿಟಿವಿ ಕ್ಯಾಮೆರಾಗಳು (CCTV Camera) ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು ಹಾಗೂ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು.
ನಿಯಮ ಉಲ್ಲಂಘನೆ ಕಂಡುಬಂದರೆ ಸಂಸ್ಥೆಯ ಮಾಲೀಕರು, ವ್ಯವಸ್ಥಾಪಕರು ಹಾಗೂ ಪರವಾನಗಿ ಹೊಂದಿರುವವರನ್ನೇ ನೇರವಾಗಿ ಹೊಣೆಗಾರರನ್ನಾಗಿ ಪರಿಗಣಿಸಲಾಗುತ್ತದೆ.
ಜೊತೆಗೆ ಪೊಲೀಸ್ ಇಲಾಖೆ, ನಿವಾಸಿ ಕಲ್ಯಾಣ ಸಂಘಗಳು ಮತ್ತು ನಾಗರಿಕ ಸಂಘಟನೆಗಳೊಂದಿಗೆ ಸಮನ್ವಯ ಸಾಧಿಸಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.
“ಗುರುತಿನ ಚೀಟಿ ಇಲ್ಲದಿದ್ದರೆ ಪ್ರವೇಶವಿಲ್ಲ” ಎಂಬ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ಅಪ್ರಾಪ್ತ ವಯಸ್ಕರಿಗೆ ಮದ್ಯ ಲಭ್ಯವಾಗುವುದನ್ನು ತಡೆಯುವ
ಗುರಿಯನ್ನು ಸರ್ಕಾರ ಹೊಂದಿದೆ. ಯುವ ಪೀಳಿಗೆಯ ಆರೋಗ್ಯಕರ ಭವಿಷ್ಯಕ್ಕಾಗಿ ಈ ಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನು ಓದಿ : https://vijayatimes.com/tata-mutual-fund-temporarily-restricts/