• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಿಧಾನಗತಿ:ಯಾವುದೇ ಕಾರಣಕ್ಕೂ ಸಮೀಕ್ಷೆಯ ಗಡುವು ವಿಸ್ತರಿಸಲಾಗುವುದಿಲ್ಲ ಎಂದ ಸಿಎಂ ಸಿದ್ಧರಾಮಯ್ಯ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಿಧಾನಗತಿ:ಯಾವುದೇ ಕಾರಣಕ್ಕೂ ಸಮೀಕ್ಷೆಯ ಗಡುವು ವಿಸ್ತರಿಸಲಾಗುವುದಿಲ್ಲ ಎಂದ ಸಿಎಂ ಸಿದ್ಧರಾಮಯ್ಯ
0
SHARES
9
VIEWS
Share on FacebookShare on Twitter
  • ತಾಂತ್ರಿಕ ತೊಂದರೆಗಳ ನಡುವೆ ಸಮೀಕ್ಷೆಯ ವೇಗ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ
  • ಪ್ರತಿದಿನ ಶೇ. 10ರಷ್ಟು ಪ್ರಗತಿ ಗುರಿ
  • ಗಣತಿದಾರರಿಗೆ ಉತ್ತಮ ಸಂಭಾವನೆ ಭರವಸೆ

Bengaluru: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜನಪ್ರಿಯವಾಗಿ “ಜಾತಿ ಗಣತಿ” ಎಂದು ಕರೆಯಲ್ಪಡುವ ಕಾರ್ಯ ಇನ್ನೂ ನಿರೀಕ್ಷಿತ ಮಟ್ಟಕ್ಕೆ ತಲುಪಿಲ್ಲ. (no extend in census survey says cm)

ಆರಂಭದ ಕೆಲವೇ ದಿನಗಳಲ್ಲಿ ಕೇವಲ ಶೇ. 2.4ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜಾತಿ ಗಣತಿಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಇತ್ತು ತಕ್ಷಣ ಸಮಸ್ಯೆ ಬಗೆಹರಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಲಾಗಿದೆ.

ಪ್ರತಿದಿನ ಕನಿಷ್ಠ ಶೇ. 10ರಷ್ಟು ಪ್ರಗತಿ ಸಾಧಿಸಬೇಕೆಂದು ಅವರು ಕಟ್ಟುನಿಟ್ಟಾಗಿ ಹೇಳಿದ್ದಾರೆ.

ಅಷ್ಟಕ್ಕೂ ಸಮೀಕ್ಷೆಯ ಆರಂಭಿಕ ದಿನಗಳಲ್ಲಿ ತಾಂತ್ರಿಕ ಸಮಸ್ಯೆಗಳು, ಸರ್ವರ್ (Server) ದೋಷಗಳು ಹಾಗೂ ದತ್ತಾಂಶ ಸಂಗ್ರಹಣೆಯ ತೊಂದರೆಗಳು ಎದುರಾಗಿದ್ದವು.

ಆದರೆ ಇದೀಗ ಶೇ. 90 ಕ್ಕೂ ಹೆಚ್ಚು ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

ಉಳಿದ ಸಮಸ್ಯೆಗಳನ್ನೂ ತ್ವರಿತವಾಗಿ ಬಗೆಹರಿಸಲಾಗುವುದು ಎಂಬ ಭರವಸೆಯೂ ನೀಡಿದ್ದಾರೆ.(no extend in census survey says cm)

ಇನ್ನು ಈ ಕುರಿತಾಗಿ ಮಾತನಾಡಿರುವ ಸಿಎಂ ಸಿದ್ಧರಾಮಯ್ಯ ಇನ್ನು ಮುಂದೆ ಸಮೀಕ್ಷಾ ಕಾರ್ಯವು ಯಾವುದೇ ಅಡಚಣೆಯಿಲ್ಲದೆ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ.ಕೆಲವು ತಾಂತ್ರಿಕ ಸಮಸ್ಯೆಗಳು ಇತ್ತು.

ಆದರೆ ಅವುಗಳನ್ನು ಬಹುತೇಕ ಪರಿಹರಿಸಲಾಗಿದೆ. ಈಗ ಸಮೀಕ್ಷೆ ನಿಗದಿತ ಅವಧಿಯಲ್ಲೇ ಪೂರ್ಣಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ (Video Conference) ಮೂಲಕ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯಕ್, ಡಿಸಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳು ಪಾಲ್ಗೊಂಡಿದ್ದರು.

ಸಭೆಯ ವೇಳೆ ಸಮೀಕ್ಷೆಯ ನಿಧಾನಗತಿ ಕುರಿತು ಕಳವಳ ವ್ಯಕ್ತಪಡಿಸಿದ ಸಿಎಂ, ಯಾವುದೇ ಕಾರಣಕ್ಕೂ ಸಮೀಕ್ಷೆಯ ಗಡುವು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದರು.

ಅಕ್ಟೋಬರ್ 7ರೊಳಗೆ ಸಮೀಕ್ಷೆ ಮುಗಿಯಲೇಬೇಕು. ಅವಧಿ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ಪುನರುಚ್ಚರಿಸಿದರು.

ಸಮೀಕ್ಷೆಯ ವೇಗ ಹೆಚ್ಚಿಸಲು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳಿಗೆ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸಿ ತಕ್ಷಣ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ.

ಜೊತೆಗೆ ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಸಚಿವರಿಗೆ ಸಹ ಸಮೀಕ್ಷೆಯ ಮೇಲ್ವಿಚಾರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಆದೇಶಿಸಲಾಗಿದೆ.

ಪ್ರತಿದಿನ ಕೇವಲ ಶೇ. 2.4ರಷ್ಟು ಪ್ರಗತಿ ದಾಖಲಾಗಿರುವ ಹಿನ್ನೆಲೆಯಲ್ಲಿ, ಇನ್ನುಮುಂದೆ ಕನಿಷ್ಠ ಶೇ. 10ರಷ್ಟು ಸಮೀಕ್ಷೆ ನಡೆಯಲೇಬೇಕು ಎಂಬ ಗುರಿ ಸಿಎಂ ನೀಡಿದ್ದಾರೆ.

ರಾಜ್ಯದಾದ್ಯಂತ ಒಟ್ಟು 1.43 ಕೋಟಿ ಕುಟುಂಬಗಳನ್ನು ಸಮೀಕ್ಷೆಯೊಳಗೆ ತರಬೇಕೆಂದು ಗುರಿ ನಿಗದಿಪಡಿಸಲಾಗಿದೆ.

ಆದರೆ ಈಗಾಗಲೇ ಕೇವಲ 2.76 ಲಕ್ಷ ಕುಟುಂಬಗಳ ಮಾಹಿತಿಯಷ್ಟೇ ಸಂಗ್ರಹಿಸಲಾಗಿದೆ. ಈ ನಿಧಾನಗತಿ ಕುರಿತು ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಸಮೀಕ್ಷೆ ಸಂಬಂಧಿತ ಪ್ರಕ್ರಿಯೆಯಲ್ಲಿ ನ್ಯಾಯಾಲಯ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಯಾವುದೇ ರೀತಿಯ ಕಾನೂನು ಉಲ್ಲಂಘನೆ ಆಗದಂತೆ ಜಾಗ್ರತೆ ವಹಿಸಲಾಗುವುದು ಎಂದೂ ಹೇಳಿದರು.

Tags: bengalurucensesCongresspoliticsSiddaramaiah

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.