ಕುಂಭಮೇಳವನ್ನು ಬೇಗ ಮುಗಿಸುವ ಯಾವುದೇ ಯೋಚನೆಯಿಲ್ಲ: ಅಧಿಕಾರಿಗಳಿಂದ ಸ್ಪಷ್ಟನೆ

ಉತ್ತರಖಾಂಡ್, ಏ. 15: ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳದ ಹಿನ್ನಲೆ ಹರಿದ್ವಾರ ಕುಂಭಮೇಳದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆ ಇನ್ನೆರಡು ದಿನಗಳಲ್ಲಿ ಕುಂಭಮೇಳವನ್ನು ಮುಕ್ತಾಯಗೊಳಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ, ಇವುಗಳನ್ನು ಅಲ್ಲಗಳೆದಿರುವ ಅಧಿಕಾರಿಗಳು, ನಿಗದಿಯಂತೆ ಕುಂಭಮೇಳ ಏ. 30ರವರೆಗೆ ಕುಂಭ ಮೇಳೆ ನಡೆಯಲಿದ್ದು, ಎರಡು ವಾರ ಮುಂಚೆಯೇ ಮುಗಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕುಂಭ ಮೇಳ ಉಸ್ತುವಾರಿ ಹೊತ್ತಿರುವ ಹರಿದ್ವಾರ ಡಿಸ್ಟ್ರಿಕ್​ ಮ್ಯಾಜಿಸ್ಟ್ರೇಟರ್​ ದೀಪಕ್​ ರಾವತ್​, ಸಾಮಾನ್ಯವಾಗಿ ಜನವರಿಯಲ್ಲಿ ಆರಂಭವಾಗುತ್ತಿದ್ದ ಕುಂಭ ಮೇಳವನ್ನು ಕೊರೋನಾ ಸೋಂಕಿನ ಪರಿಸ್ಥಿತಿ ಗಮನಿಸಿ ಈ ಬಾರಿ ಏಪ್ರಿಲ್​ನಲ್ಲಿ ನಿಗದಿಸಲಾಗಿದೆ. ಕೋವಿಡ್​ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆ ಈ ಅವಧಿಯನ್ನು ಕಡಿಮೆಗೊಳಿಸುವ ಕುರಿತು ಕೇಂದ್ರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು

ಕುಂಭಮೇಳವನ್ನು ಸಮಯಕ್ಕೂ ಮೊದಲೇ ಮುಕ್ತಾಯಗೊಳಿಸುವ ಬಗ್ಗೆ ಕೇಂದ್ರ ಇನ್ನು ಯಾವುದೇ ಯೋಜನೆ ರೂಪಿಸಿಲ್ಲ. ಸರ್ಕಾರ ಸೋಂಕು ಹರಡುವಿಕೆಯನ್ನು ತಡೆಯಲು ಯಾವ ಮಾರ್ಗಸೂಚಿ ಕೈಗೊಳ್ಳಬಹುದು ಎಂಬ ಕುರಿತ ಆಲೋಚನೆಗಳೊಂದಿಗೆ ಬರುವಂತೆ ಅಧಿಕಾರಿಗಳಿಗೆ ತಿಳಿಸಿದೆ.

Exit mobile version