ಕೆಆರ್​ಎಸ್​ನ 30ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡುವಂತಿಲ್ಲ: ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್​

Bengaluru: ಕರ್ನಾಟಕ (Karnataka) ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದ್ದು, ಕೆಆರ್‌ಎಸ್‌ (KRS) ಸುತ್ತಮುತ್ತ 30ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು

ಮತ್ತು ಗಣಿಗಾರಿಕೆ ನಿಷೇಧಿಸಬೇಕು ಎಂದು ತೀರ್ಪನ್ನು ಕಾಯ್ದಿರಿಸಿದೆ.

ಹೈಕೋರ್ಟ್​ನ (Highcourt) ವಿಭಾಗೀಯ ಪೀಠ ತನ್ನ ಆದೇಶದಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಹಾನಿ ಆಗುತ್ತಿರುವುದನ್ನು ತಡೆಗಟ್ಟಬೇಕಿದೆ ನಮಗೆ ಕೆಆರ್‌ಎಸ್‌ ಸುರಕ್ಷತೆ ಮುಖ್ಯವಾಗಿದೆ ಎಂದು ಹೇಳಿದ್ದು,

ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆಗೆ ಪರವಾನಗಿ ವಿಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಈ ತೀರ್ಪನ್ನು ಹೊರಡಿಸಿದೆ.

ಜಿಲ್ಲಾಧಿಕಾರಿ ಕೆಆರ್​ಎಸ್ ಸುತ್ತಮುತ್ತ ಗಣಿಗಾರಿಕೆಗೆ ಷರತ್ತು ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿತ್ತು. ಮಾನ್ಯ ಜಿಲ್ಲಾಧಿಕಾರಿಗಳು ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ

ನಡೆಸಿ. ಹಾನಿ ಸಾಧ್ಯತೆ ಪರಿಗಣಿಸಿ ಅನುಮತಿಗೆ ಷರತ್ತು ಹಾಕಿದ್ದರು. ಸರ್ಕಾರದ ನಿರ್ದೇಶನದಂತೆ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಲಾಗಿದೆ.

ಅಲ್ಲಿಯವರೆಗೆ ಗಣಿಗಾರಿಕೆಗೆ ಅನುಮತಿಸುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಕೆಆರ್‌ಎಸ್‌ ಜಲಾಶಯಕ್ಕೆ ಭಾರೀ ಹಾನಿಯಾಗಲಿದ್ದು, ಕೆಆರ್‌ಎಸ್‌ ಅನ್ನು ಅಲ್ಲಿನ ಜನರ ರಕ್ತ ಮತ್ತು ಬೆವರಿನಿಂದ ಕಟ್ಟಲಾಗಿದೆ.

ಈ ಜಲಾಶಯಕ್ಕೆ ಏನಾದರೂ ಆದರೆ ಏನು ಮಾಡುವುದು? ಎಂದು ಮುಖ್ಯ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ (Krishna Dikshith) ಆತಂಕ ವ್ಯಕ್ತಪಡಿಸಿದರು.

ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ನ್ಯಾಯಾಲಯದ ನಿರ್ಧಾರವನ್ನು ಸ್ವಾಗತಿಸಿದ್ದು, ಕೆಆರ್​ಎಸ್ ಸುತ್ತಮುತ್ತ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಿ

ಹೊರಡಿಸಿರುವ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠದ ಆದೇಶ ಅತ್ಯಂತ ಸೂಕ್ತವಾಗಿದೆ ಎಂದಿದ್ದು, ಇಂಥದ್ದೊಂದು ಮಹತ್ವದ ಆದೇಶವನ್ನು ನೀಡಿರುವ ಹೈಕೋರ್ಟಿನ ನ್ಯಾಯಮೂರ್ತಿಗಳಾದ

ಪಿ.ಬಿ.ವರಾಳೆ (P B Varale) ಹಾಗೂ ಕೃಷ್ಣ.ಎಸ್. ದೀಕ್ಷಿತ್​ಗೆ ಧನ್ಯವಾದಗಳನ್ನು ಅರ್ಪಿಸುವೆ ಎಂದಿದ್ದಾರೆ.

ನನ್ನ ಬಹುದಿನದ ಹೋರಾಟಕ್ಕೆ ಈ ಆದೇಶ ಮತ್ತಷ್ಟು ಬಲ ತಂದಿದ್ದು, ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಬೇಕು ಎನ್ನುವ ನಾವೆಲ್ಲರೂ ಕೆ.ಆರ್.ಎಸ್ ಅನ್ನು ಉಳಿಸಿಕೊಳ್ಳಬೇಕಿದೆ ಎಂದು

ಮನವಿ ಮಾಡಿಕೊಂಡಿದ್ದಾರೆ. ಈ ಹೈಕೋರ್ಟ್ ಆದೇಶ ಪರೋಕ್ಷವಾಗಿ ಸುಮಾಲತಾಗೆ ಜಯ ಸಿಕ್ಕಂತಾಗಿದೆ.

Exit mobile version