ಹೊಸದಿಲ್ಲಿ : ರಾಷ್ಟ್ರೀಯ ಷೇರು ಮಾರುಕಟ್ಟೆ (NSE)ಯ ಮಾಜಿ CEO ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ತಡರಾತ್ರಿ ದೆಹಲಿಯಲ್ಲಿ ಬಂಧಿಸಿತ್ತು. ಒಂದು ಕಾಲದಲ್ಲಿ ಷೇರು ಮಾರುಕಟ್ಟೆಯ ರಾಣಿಯಂತೆ ಮೆರೆದ ಚಿತ್ರಾ ಬಂಧನಕ್ಕೆ ಒಳಗಾಗಿರುವುದು ಎಲ್ಲರಲ್ಲು ಆಶ್ಚರ್ಯ ಹುಟ್ಟಿಸಿದೆ.
ಚಿತ್ರಾರವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ನಂತರ ಅವರನ್ನು ಸಿಬಿಐ ಪ್ರಧಾನ ಕಚೇರಿಯ ಲಾಕಪ್‌ನಲ್ಲಿ ಇರಿಸಲಾಗಿತ್ತು.
ತನಿಖಾ ಸಂಸ್ಥೆಯು ಸತತ ಮೂರು ದಿನಗಳ ಕಾಲ ಚಿತ್ರಾ ಅವರನ್ನು ವಿಚಾರಣೆ ಮಾಡಿದೆ. ಅವರ ನಿವಾಸದಲ್ಲಿ ಶೋಧ ನಡೆಸಲಾಗಿದ್ದು, ಸಿಬಿಐ ಪ್ರಶ್ನೆಗಳಿಗೆ ಚಿತ್ರಾ ಅವರು ಸರಿಯಾಗಿ ಪ್ರತಿಕ್ರಿಯಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಲಯ. ಚಿತ್ರಾ ರಾಮಕೃಷ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಇದೀಗ ನ್ಯಾಯಾಲಯ ಚಿತ್ರಾ ರಾಮಕೃಷ್ಣ ರವರಿಗೆ ಜಾಮೀನು ನೀಡಲು ನಿರಾಕರಿಸಿದೆ! ಎನ್‌ಎಸ್‌ಇ ಕೋ-ಲೊಕೇಷನ್ ಪ್ರಕರಣದಲ್ಲಿ ಆಕೆಯ ಜಾಮೀನಿಗೆ ಕೇಂದ್ರ ತನಿಖಾ ಸಂಸ್ಥೆ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎನ್‌ಎಸ್‌ಇಯ ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರನ್ನು ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ ಬಂಧಿಸಲಾಗಿತ್ತು.
